ಮೈಸೂರು: ಲೋಕಾಯುಕ್ತ ಪೊಲೀಸರು ಗುರುವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಆದಾಯಕ್ಕಿಂತ ಹೆಚ್ಚು ಹಣ ಸಂಪಾದಿಸಿದ್ದಾರೆ ಎಂಬ ಆರೋಪದ ಮೇರೆಗೆ ಏಕಕಾಲದಲ್ಲಿ ಇಬ್ಬರು ಅಧಿಕಾರಿಗಳಿಗೆ ಸೇರಿದ ಏಳು ಕಡೆ ದಾಳಿ ನಡೆಸಿದ್ದಾರೆ.
ಜ್ಯೂನಿಯರ್ ಇಂಜಿನಿಯರ್ ಕೆ.ಆರ್.ಚಂದ್ರಶೇಖರ್, ಡೆಪ್ಯುಟಿ ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್ ಆಲ್ತಾಫ್ ಹುಸೇನ್ ಜಪ್ಪಾರ್ಪಿ ದಾಳಿಗೊಳಗಾದವರಾಗಿದ್ದು, ಮನೆ ಹಾಗೂ ಕಚೇರಿಗಳಲ್ಲಿ ಲೋಕಾಯುಕ್ತ ಪೊಲೀಸರು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು ನಗರದ ವಿಜಯನಗರ ಮೊದಲ ಹಂತ, ಎರಡನೇ ಹಂತ ಸೇರಿದಂತೆ ಆರು ಕಡೆ ಹಾಗೂ ತಿ.ನರಸೀಪುರದಲ್ಲಿ ಒಂದು ಕಡೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.