ಹನಗೋಡು ಹೋಬಳಿಯ ದೊಡ್ಡಹೆಜ್ಜೂರಿನ ಶ್ರೀ ಆಂಜನೇಸ್ವಾಮಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಶಾಂತಿಸಭೆಯಲ್ಲಿ ಎನ್.ಮುನಿಯಪ್ಪ ಮಾತನಾಡಿದರು. ರಾಧಾ, ಶೇಖರೇಗೌಡ, ಸುಭಾಷ್, ಮಹೇಶ್, ನಟರಾಜ್ ಸೇರಿದಂತೆ ಇತರರು ಇದ್ದರು. 
ಮೈಸೂರು

ಜಾತ್ರೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿ

ಶಿವಶಂಕರ್ ಎಂ. ಹೆಬ್ಬಳ್ಳ

ಪ್ರಮುಖ ಮುಖ್ಯಾಂಶಗಳು

  • ಪೊಲೀಸ್ ಇನ್‌ಸ್ಪೆಕ್ಟರ್ ಎನ್.ಮುನಿಯಪ್ಪ ಮನವಿ
ಹನಗೋಡು: ಜ.16 ರಿಂದ 19 ವರೆಗೆ ನಾಲ್ಕು ದಿನಗಳ ಕಾಲ ಹೋಬಳಿಯ ದೊಡ್ಡಹೆಜ್ಜೂರಿನಲ್ಲಿ ನಡೆಯಲಿರುವ ಶ್ರೀ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ವತಿಯಿಂದ ಶಾಂತಿಸಭೆ ಸೋಮವಾರ ದೇವಾಲಯದ ಆವರಣದಲ್ಲಿ ನಡೆಯಿತು.
ಸಭೆಯಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಎನ್.ಮುನಿಯಪ್ಪ ಮಾತನಾಡಿ, ಜಾತ್ರೆಗೆ ಆಗಮಿಸುವ ಭಕ್ತರಿಗೆ ಯಾವುದೇ ಅಡಚಣೆಗಳಾಗದಂತೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು. ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಎಲ್ಲರ ಕರ್ತವ್ಯವಾಗಿದ್ದು, ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಜಾತ್ರೆಯಲ್ಲಿ ಭಕ್ತರ ಸುರಕ್ಷತೆ, ಸಂಚಾರ ನಿಯಂತ್ರಣ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಯಾವುದೇ ಗಲಭೆ, ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡಿದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಸಭೆಯಲ್ಲಿ ಸಬ್ ಇನ್‌ಸ್ಪೆಕ್ಟರ್ ರಾಧಾ, ದೇವಾಲಯ ಸೇವಾ ಸಮಿತಿ ಅಧ್ಯಕ್ಷ ಶೇಖರೇಗೌಡ, ದೊಡ್ಡಹೆಜ್ಜೂರು ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಮುದಗನೂರು ಸುಭಾಷ್, ದಾ.ರಾ.ಮಹೇಶ್, ಸಮಿತಿ ಕಾರ್ಯದರ್ಶಿ ನಟರಾಜ್ ಮುಖಂಡರಾದ ರಾಜೇಗೌಡ, ಹೊಂಬೇಗೌಡ ಭೈರೇಗೌಡ, ಮಾದೇಗೌಡ ಪಾಪಣ್ಣ, ಸ್ವಾಮಿನಾಯಕ, ಪೊಲೀಸ್ ಸಿಬ್ಬಂದಿ ದಿನೇಶ್ ಸೇರಿದಂತೆ ಗ್ರಾಮಸ್ಥರು, ಜಾತ್ರಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.