ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ 
ಮೈಸೂರು

ಗಾಂಜಾ ಮಾರುತ್ತಿದ್ದವನ ಬಂಧನ

ಶಿವಶಂಕರ್ ಎಂ. ಹೆಬ್ಬಳ್ಳ

ಪ್ರಮುಖ ಮುಖ್ಯಾಂಶಗಳು

  • ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ
ಬೈಲುಕುಪ್ಪೆ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬೈಲುಕುಪ್ಪೆ ಪೊಲೀಸರು ಮಾಲು ಸಮೇತ ಶನಿವಾರ ರಾತ್ರಿ ಬಂಧಿಸಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ದೊಡ್ಡ ಹೊಸೂರು 16ನೇ ಸೈಟಿನ ಬಸವರಾಜ್ (40) ಬಂಧಿತ. ಬೈಲುಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಕ್ಷ್ಮೀಪುರ ಮುಖ್ಯ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ವೃತ್ತ ನಿರೀಕ್ಷಕ ದೀಪಕ್ ಮಾರ್ಗದರ್ಶನದಲ್ಲಿ ಪಿಎಸ್‌ಐ ರವಿ ಹಾಗೂ ಸಿಬ್ಬಂದಿ ದಾಳಿ ನಡೆಸಿ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನಿಂದ 350 ಗ್ರಾಂ ಗಾಂಜಾ ಜಪ್ತಿ ಮಾಡಿದ್ದಾರೆ. ಈ ಸಂಬಂಧ ಪ್ರಕರಣದ ದಾಖಲಿಸಿಕೊಂಡಿರುವ ಬೈಲುಕುಪ್ಪೆ ಠಾಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ .
ಕಾರ್ಯಾಚರಣೆಯಲ್ಲಿ ಮುದ್ದುರಾಜ್, ರಾಜೇಶ್, ರುದ್ರೇಶ್, ರವಿಕುಮಾರ್ ಭಾಗವಹಿಸಿದ್ದರು.