ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಭಾನುವಾರ ರಥಸಪ್ತಮಿ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಶ್ರೀವತ್ಸ, ಡಾ.ಪಿ.ಎನ್. ಗಣೇಶ್ ಕುಮಾರ್, ಡಾ.ಎಚ್.ಎ. ಶಶಿರೇಖಾ, ಗೀತಾ ಕುಮಾರ್ , ವಿನಯ್ ಬಾಬು ಹಾಗೂ ಇತರರು ಪಾಲ್ಗೊಂಡಿದ್ದರು.
ಮೈಸೂರು: ನಗರದ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಭಾನುವಾರ ರಥಸಪ್ತಮಿ ಅಂಗವಾಗಿ 108 ಸಾಮೂಹಿಕ ಸೂರ್ಯ ನಮಸ್ಕಾರ ಮತ್ತು ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಯೋಗ ಸ್ಪೋರ್ಟ್ಸ್ ಫೌಂಡೇಷನ್, ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮ, ಮೈಸೂರು ವಿವೇಕಾನಂದ ಯೋಗ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ, ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್, ಗ್ಲೋಬಲ್ ಯೋಗ ಫೋರಂ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಪತಂಜಲಿ ಯೋಗಸೂತ್ರ ಪಠಣ, ಚಿತ್ರಕಲೆ, ರಸಪ್ರಶ್ನೆ ಹಾಗೂ ಯೋಗಾಸನ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ 395 ಜನರು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಮೈಸೂರು ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲ ಶ್ರೀವತ್ಸ ಉದ್ಘಾಟಿಸಿದರು. ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ಡಾ.ಪಿ.ಎನ್. ಗಣೇಶ್ ಕುಮಾರ್, ಮೈಸೂರು ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಆರ್‌ಎಂಒ ಡಾ.ಎಚ್.ಎ. ಶಶಿರೇಖಾ, ಜಿಲ್ಲಾ ಯೋಗ ಸ್ಪೋರ್ಟ್ಸ್ ಫೌಂಡೇಷನ್ ಕಾರ್ಯದರ್ಶಿ ಗೀತಾ ಕುಮಾರ್, ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಟ್ರಸ್ಟಿ ವಿನಯ್ ಬಾಬು ಹಾಗೂ ಇತರರು ಪಾಲ್ಗೊಂಡಿದ್ದರು.