ಪಿರಿಯಾಪಟ್ಟಣದ ಡಿಪಿಬಿಎಸ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ದತ್ತಿ ವಿತರಣೆ ಮತ್ತು ಶಾರದಾ ಪೂಜಾ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಎನ್‌ಎಸ್‌ಕ್ಯೂಎಫ್ ವತಿಯಿಂದ ಬಹುಮಾನ ವಿತರಿಸಲಾಯಿತು. ರವಿಚಂದ್ರಸ್ವಾಮಿ, ಶಂಕರಪ್ಪ, ಬಸಪ್ಪ, ಲಕ್ಷ್ಮಣ ತಳವಾರ್, ಕುಮಾರಿ, ದೇವರಾಜ್, ನರೇಂದ್ರ ಬಾಬು, ಲೋಕೇಶ್, ಮಂಜುಳಾ, ಪೂರ್ಣಿಮಾ ಇತರರು ಇದ್ದರು. 
ಮೈಸೂರು

ಮಕ್ಕಳ ಗುರಿ ಸಾಧನೆಯತ್ತ ಇರಲಿ

ಶಿವಶಂಕರ್ ಎಂ. ಹೆಬ್ಬಳ್ಳ

ಪ್ರಮುಖ ಮುಖ್ಯಾಂಶಗಳು

  • ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಪ್ರಸನ್ನ ಸಲಹೆ
ಪಿರಿಯಾಪಟ್ಟಣ: ವಿದ್ಯಾರ್ಥಿಗಳು ಏಕಾಗ್ರತೆ ಮತ್ತು ಪರಿಶ್ರಮದಿಂದ ಅಭ್ಯಸಿಸಿದಲ್ಲಿ ತಮ್ಮ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಪ್ರಸನ್ನ ತಿಳಿಸಿದರು.
ಪಟ್ಟಣದ ಡಿಪಿಬಿಎಸ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ದತ್ತಿ ವಿತರಣೆ ಮತ್ತು ಶಾರದಾ ಪೂಜಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಚಂಚಲತೆಯ ಮನಸ್ಥಿತಿಯನ್ನು ಬದಿಗೊತ್ತಿ, ಅನುಪಯುಕ್ತ ವಿಷಯಗಳ ಕಡೆ ಗಮನಹರಿಸದೆ ತಮ್ಮ ಸಾಧನೆಯ ಗುರಿಯ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ಪ್ರಶಂಶಿಸಿದರು.
ಕಾಲೇಜಿನ ಉಪ ಪ್ರಾಂಶುಪಾಲ ರವಿಚಂದ್ರಸ್ವಾಮಿ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸಕ್ಕೆ ಅನುಕೂಲಕರ ವಾತಾವರಣವಿದ್ದು, ಪ್ರತಿ ವರ್ಷ ಉತ್ತಮ ಫಲಿತಾಂಶ ಬರುತ್ತಿದೆ. ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡುವುದರ ಮೂಲಕ ಸರ್ಕಾರಿ ಶಾಲೆಗಳ ಉಳಿವಿಗೆ ಪಾಲಕರು ಶ್ರಮಿಸಬೇಕು ಎಂದರು.
ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಎನ್‌ಎಸ್‌ಕ್ಯೂಎಫ್ ವತಿಯಿಂದ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು ಮತ್ತು ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪ್ರಶಾಂತ್, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಶಿವರಾಜ್, ಎಸ್‌ಡಿಎಂಸಿ ಅಧ್ಯಕ್ಷ ಶಂಕರಪ್ಪ, ಮಾಜಿ ಅಧ್ಯಕ್ಷ ಚೌತಿ ಮಲ್ಲಣ್ಣ, ಸದಸ್ಯರಾದ ರವಿತೇಜ, ಕುಮಾರ, ಗಣೇಶ್, ಶಿವಪ್ಪ, ಮೋಹನ್, ಅನಿತಾ, ಉಮೇದ, ಜ್ಯೋತಿ, ಶಿಕ್ಷಕರಾದ ಬಸಪ್ಪ, ಲಕ್ಷ್ಮಣ ತಳವಾರ್, ಕುಮಾರಿ, ದೇವರಾಜ್, ನರೇಂದ್ರ ಬಾಬು, ಲೋಕೇಶ್, ಮಂಜುಳಾ, ಪೂರ್ಣಿಮಾ ಸೇರಿದಂತೆ ಇತರರಿದ್ದರು.