ಸಮಾಜ ಕಲ್ಯಾಣ ಇಲಾಖೆಯ ಬಾಬೂ ಜಗಜೀವನ ರಾಮ್ ಭವನದಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿದರು. ಮಂಜೇಗೌಡ, ಯುಕೇಶ್ ಕುಮಾರ್, ವಿಷ್ಣುವರ್ಧನ್, ಶೇಖ್ ತನ್ವೀರ್ ಆಸೀಫ್, ರಂಗೇಗೌಡ ಇತರರಿದ್ದರು. 
ಮೈಸೂರು

ಚಿಕ್ಕಕಾಟೂರಿನ ಜಮೀನು ಅಳತೆ ಮಾಡಿ ವರದಿ ನೀಡಿ : ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಸೂಚನೆ

ಪ್ರಮುಖ ಮುಖ್ಯಾಂಶಗಳು

  • ಎಲೆ ತೋಟದಲ್ಲಿ ಜಮೀನು ಕಳೆದುಕೊಂಡವರಿಗೆ ಪರಿಹಾರ ನೀಡಲು ಕ್ರಮ
  • ಕೊರೆಯಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ಈ ವಿಷಯವನ್ನು ರಾಜ್ಯ ಮಟ್ಟದ ಸಮಿತಿಯ ಗಮನಕ್ಕೆ ತಂದು ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು
  • ಪೊಲೀಸ್ ಇಲಾಖೆಯಲ್ಲಿ ನಡೆಯುವ ಪರಿಶಿಷ್ಟ ಜಾತಿ/ಪಂಗಡದ ಕುಂದು ಕೊರತೆ ಸಭೆಗಳಿಗೆ ಜಿಲ್ಲಾ ಪರಿಶಿಷ್ಟ/ಪಂಗಡದ ಜಾಗೃತ ಮತ್ತು ಉಸ್ತುವಾರಿ ಸಮಿತಿಯ 6 ಸದಸ್ಯರನ್ನು ಕಡ್ಡಾಯವಾಗಿ ಆಹ್ವಾನಿಸಬೇಕು ಎಂದು ಸೂಚಿಸಿದರು
ಮೈಸೂರು: ಎಲೆ ತೋಟದಲ್ಲಿ ಜಮೀನು ಕಳೆದುಕೊಂಡವರಿಗೆ ಪರಿಹಾರ ನೀಡುವ ಸಲುವಾಗಿ ಮೈಸೂರು ತಾಲೂಕು ಜಯಪುರ ಹೋಬಳಿಯ ಚಿಕ್ಕಕಾಟೂರು ಗ್ರಾಮದ ಸ.ನಂ.60ರ ಜಮೀನನ್ನು ಡಿಸೆಂಬರ್ ಅಂತ್ಯದೊಳಗೆ ಅಳತೆ ಮಾಡಿ ನಕ್ಷೆಯೊಂದಿಗೆ ವಿವರವಾದ ವರದಿ ನೀಡುವಂತೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಬಾಬೂ ಜಗಜೀವನ ರಾಮ್ ಭವನದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಹಿಂದೆ ನಡೆದ ಬಹಳಷ್ಟು ಸಭೆಗಳಲ್ಲಿ ಎಲೆ ತೋಟದ ಜಮೀನು ಕಳೆದುಕೊಂಡವರ ಬಗ್ಗೆ ಚರ್ಚೆಯಾಗುತ್ತಿದ್ದು, ಅಧಿಕಾರಿಗಳು ಕೆಲಸಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಎಂದರು.
ಪೊಲೀಸ್ ಇಲಾಖೆಯಲ್ಲಿ ನಡೆಯುವ ಪರಿಶಿಷ್ಟ ಜಾತಿ/ಪಂಗಡದ ಕುಂದು ಕೊರತೆ ಸಭೆಗಳಿಗೆ ಜಿಲ್ಲಾ ಪರಿಶಿಷ್ಟ/ಪಂಗಡದ ಜಾಗೃತ ಮತ್ತು ಉಸ್ತುವಾರಿ ಸಮಿತಿಯ 6 ಸದಸ್ಯರನ್ನು ಕಡ್ಡಾಯವಾಗಿ ಆಹ್ವಾನಿಸಬೇಕು ಎಂದು ಸೂಚಿಸಿದರು.
ಆಶ್ರಮ ಶಾಲೆಗಳಲ್ಲಿ ವಿದ್ಯಾರ್ಥಿಗಳು ಸರಿಯಾಗಿ ಹಾಜರಾಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದೆ. ಈ ಬಗ್ಗೆ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಆಶ್ರಮ ಶಾಲೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಇ ಹಾಜರಾತಿ ಅಳವಡಿಸಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಿ. ಈ ಹಿಂದೆ ಇ ಹಾಜರಾತಿ ಅಳವಡಿಸದೆ ಇರುವ ಬಗ್ಗೆ ವರದಿ ನೀಡಿ ಎಂದರು.
ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದಲ್ಲಿ ನಿರ್ಮಿಸಿರುವ ಸಮುದಾಯ ಭವನಗಳಿಗೆ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮುದಾಯ ಭವನಗಳ ನಿರ್ವಹಣಾ ಸಮಿತಿಯನ್ನು ರಚಿಸಿ ಆಯಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸೂಚಿಸಿದರು.
ಬಹಳಷ್ಟು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಹುಣಸೂರು ತಾಲೂಕು ಹನಗೋಡು ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಸರ್ಕಾರ 1 ಕೋಟಿ ರೂ. ಅನುದಾನ ನಿಗದಿಯಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಮಂಜೇಗೌಡ ಮಾತನಾಡಿ, 2021-22ನೇ ಸಾಲಿನಲ್ಲಿ ಟಿಎಸ್‌ಪಿ ಫಲಾನುಭವಿಯೊಬ್ಬರ ಜಮೀನಿನ ಕೊಳವೆಬಾವಿ
ಕೊರೆಯಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ಈ ವಿಷಯವನ್ನು ರಾಜ್ಯ ಮಟ್ಟದ ಸಮಿತಿಯ ಗಮನಕ್ಕೆ ತಂದು ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಂಗೇಗೌಡ, ಜಾಗೃತ ಮತ್ತು ಉಸ್ತುವರಿ ಸಮಿತಿ ಸದಸ್ಯ ಚಿಕ್ಕಜವರಯ್ಯ, ಎಸ್.ಟಿ.ರವಿಕುಮಾರ್, ವೇಣುಗೋಪಲ್, ಪಾರ್ವತಮ್ಮ, ಮಹದೇವ್ ಹಾಗೂ ಬಸವರಾಜು ಉಪಸ್ಥಿತರಿದ್ದರು.