ಮೈಸೂರು: ಮೈಸೂರು ಮೆಡಿಕಲ್ ಕಾಲೇಜಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ಸುಭಾಷ್‌ನಗರದಲ್ಲಿ ಬುಧವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೂಲತಃ ಕೊಪ್ಪಳದ ಡಾ.ಸೈಯದ್ ಅಹಮದ್ ಸಲೀಂ(49) ಆತ್ಮಹತ್ಯೆ ವಾಡಿಕೊಂಡ ವೈದ್ಯ ವಿದ್ಯಾರ್ಥಿ. ಇವರು ಸುಭಾಷ್ ನಗರದಲ್ಲಿ ಪತ್ನಿಯೊಂದಿಗೆ ನೆಲೆಸಿದ್ದರು.
ತಮ್ಮ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮದುವೆಯಾಗಿ 19 ವರ್ಷಗಳಾದರೂ ಮಕ್ಕಳಾಗದ ಕಾರಣ ಖಿನ್ನತೆಯಿಂದ ಬಳಲುತ್ತಿದ್ದ ಅವರು, 6 ತಿಂಗಳ ಹಿಂದೆಯಷ್ಟೇ ಮಗುವೊಂದನ್ನು ದತ್ತು ಪಡೆದಿದ್ದರು. ಮಕ್ಕಳಿರದ ಕಾರಣದಿಂದ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ವಾಡಿಕೊಂಡಿದ್ದಾರೆ ಎಂದು ಪತ್ನಿ ದೂರು ನೀಡಿದ್ದು, ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.