ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್‌ಗೌಡ ಅವರು ಬುಧವಾರ ಕೆ.ಜಿ.ಕೊಪ್ಪಲಿನಲ್ಲಿ ಮನೆ, ಮನೆಗೆ ಪಾದಯಾತ್ರೆ ನಡೆಸಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಭಾಸ್ಕರ್, ಹರೀಶ್, ಸತ್ಯಮೂರ್ತಿ ಇತರರು ಇದ್ದರು. 
ಮೈಸೂರು

ಮೈಸೂರು ಚಾಮರಾಜ ಕ್ಷೇತ್ರದಲ್ಲಿ ಶಾಸಕ ಹರೀಶ್‌ಗೌಡ ಮನೆ ಮನೆ ಪಾದಯಾತ್ರೆ

ಪ್ರಮುಖ ಮುಖ್ಯಾಂಶಗಳು

  • ಸಮಸ್ಯೆ ಆಗದಂತೆ ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆ ತಯಾರಿಸಿ ಕ್ರಮವಹಿಸುವ ಮೂಲಕ ಶೀಘ್ರವಾಗಿ ನೀರಿನ ಸಮಸ್ಯೆ ಬಗೆಹರಿಸಿ
  • ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ನೇರವಾಗಿ ಜನರಿಗೆ ತಲುಪಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು
ಮೈಸೂರು:ನಗರ ಪಾಲಿಕೆಯ ವಾರ್ಡ್ ಸಂಖ್ಯೆ 42ರ ಕೆ.ಜಿ.ಕೊಪ್ಪಲು ವ್ಯಾಪ್ತಿಯಲ್ಲಿ ಶಾಸಕ ಕೆ.ಹರೀಶ್‌ಗೌಡ ಪಾದಯಾತ್ರೆ ನಡೆಸಿ ಜನರಿಂದ ಅಹವಾಲು ಸ್ವೀಕರಿಸಿದರು.
ಕೆ.ಜಿ.ಕೊಪ್ಪಲಿನ ಶ್ರೀ ಚಂದ್ರಮೌಳೇಶ್ವರಸ್ವಾಮಿ ದೇವಸ್ಥಾನದಿಂದ ಪಾದಯಾತ್ರೆ ಆರಂಭಿಸಿ ಮನೆ, ಮನೆಗೆ ಭೇಟಿ ನೀಡಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದರು. ರೈಲ್ವೆ ಗೇಟ್ ಹಿಂಭಾಗದ ರಸ್ತೆಗಳಲ್ಲಿ ಚರಂಡಿ ಸಮಸ್ಯೆ ನಿವಾರಿಸಿ ರಸ್ತೆ ಕಾಮಗಾರಿ ಮಾಡಿಸಿಕೊಡುವಂತೆ ನಿವಾಸಿಗಳು ಕೋರಿದರು.
ವಾರ್ಡ್‌ನಲ್ಲಿ ಕೆಲವು ಕಡೆ ನೀರಿನ ಸಮಸ್ಯೆ ಇದೆ, ಹಬ್ಬ, ವಿಶೇಷ ದಿನಗಳಲ್ಲಿಯೂ ನೀರು ಸರಿಯಾಗಿ ಬರುವುದಿಲ್ಲ. ಇನ್ನೂ ಕೆಲವೆಡೆ ರಸ್ತೆ ಸಮತಟ್ಟಿಲ್ಲದ ಕಾರಣ ನಲ್ಲಿಗಳಲ್ಲಿ ನೀರು ಬಾರದಿರುವ ಬಗ್ಗೆ ಹಾಗೂ ನೀರಿನ ಸಮಸ್ಯೆಯನ್ನು ಅತಿ ತುರ್ತಾಗಿ ಸರಿಪಡಿಸುವಂತೆ ಕೋರಿಕೊಂಡರು.
ಸ್ಥಳದಲ್ಲಿಯೇ ಇದ್ದ ವಾಣಿ ವಿಲಾಸ ನೀರು ಸರಬರಾಜು ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್‌ಕುಮಾರ್ ಹಾಗೂ ಎಇಇ ಮುಸ್ತಫಾ ಅವರಿಗೆ ವಾರ್ಡ್‌ನಲ್ಲಿ ನೀರಿನ ಸಮಸ್ಯೆ ಆಗದಂತೆ ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆ ತಯಾರಿಸಿ ಕ್ರಮವಹಿಸುವ ಮೂಲಕ ಶೀಘ್ರವಾಗಿ ನೀರಿನ ಸಮಸ್ಯೆ ಬಗೆಹರಿಸುವಂತೆ ಶಾಸಕರು ಸೂಚಿಸಿದರು.
ಕೆ.ಜಿ.ಕೊಪ್ಪಲು ಹಳೇ ಗ್ರಾಮವಾಗಿರುವುದರಿಂದ ವಿದ್ಯುತ್ ಕಂಬಗಳು ಕೆಲವು ಕಡೆ ವಾಲಿಕೊಂಡಿದ್ದು, ಅದನ್ನು ಸರಿಪಡಿಸಬೇಕು. ಕೆಲವು ಕಡೆ ಬೀದಿ ದೀಪಗಳನ್ನು ಅಳವಡಿಸಿಕೊಡುವಂತೆ ಸ್ವೀಕೃತವಾದ ದೂರುಗಳಿಗೆ ಸ್ಥಳದಲ್ಲಿಯೇ ಇದ್ದ ಸೆಸ್ಕ್ ಅಧಿಕಾರಿಗಳಿಗೆ ಶೀಘ್ರದಲ್ಲಿಯೇ ಸಮಸ್ಯೆಯನ್ನು ಬಗೆಹರಿಸುವಂತೆ ತಿಳಿಸಿದರು.
ನೀರು, ರಸ್ತೆ, ಚರಂಡಿ, ಬೀದಿ ದೀಪ, ಸ್ವಚ್ಛತೆ ಸೇರಿದಂತೆ ಹಲವಾರು ನಾಗರಿಕ ಸಮಸ್ಯೆಗಳ ಕುರಿತು ಜನರು ಅಹವಾಲು ಸಲ್ಲಿಸಿದರು. ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿದರೆ, ಉಳಿದವುಗಳನ್ನು ನಿಗದಿತ ಅವಧಿಯೊಳಗೆ ಪರಿಹರಿಸುವುದಾಗಿ ಶಾಸಕರು ಭರವಸೆ ನೀಡಿದರು.
ಪಿಂಚಣಿ ಮಾಡಿಸಿಕೊಡಬೇಕು, ಮತದಾರರ ಪಟ್ಟಿಗೆ ಹೆಸರು ನೋಂದಣಿಯಾಗಬೇಕು ಎನ್ನುವುದು ಸೇರಿದಂತೆ ಇನ್ನಿತರ ಸಮಸ್ಯೆ ಕುರಿತು ಜನರಿಂದ ಬಂದ ಅಹವಾಲಿಗೆ ಸ್ಥಳದಲ್ಲಿಯೇ ಇದ್ದ ಕಂದಾಯಾಧಿಕಾರಿಗಳು, ವಲಯ ಆಯುಕ್ತರಿಗೆ ಸಾರ್ವಜನಿಕರಿಂದ ಮಾಹಿತಿ ಪಡೆದು ಕೂಡಲೇ ಸಮಸ್ಯೆಯನ್ನು ಬಗೆಹರಿಸಿದರು.
ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ನೇರವಾಗಿ ಜನರಿಗೆ ತಲುಪಬೇಕು. ಅಧಿಕಾರಿಗಳು ಕಾರ್ಯ ಪ್ರವೃತರಾಗಿರಬೇಕು ಎಂಬ ಉದ್ದೇಶದಿಂದ ಈ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕರು ಹೇಳಿದರು.
ಸಾರ್ವಜನಿಕರಿಗೆ ಗೃಹಜ್ಯೋತಿ, ಗೃಹಲಕ್ಷ್ಮಿ, ವಿವಿಧ ಪಿಂಚಣಿಗಳ ವಿಳಂಬ ಕುರಿತು ಗೊಂದಲಗಳಿದ್ದಲ್ಲಿ ಅಧಿಕಾರಿಗಳು ಕೂಡಲೇ ಬಗೆಹರಿಸಬೇಕು ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ನಗರಪಾಲಿಕೆಯ ಉಪ ಆಯುಕ್ತ (ಕಂದಾಯ) ಸೋಮಶೇಖರ್, ಅಧೀಕ್ಷಕ ಇಂಜಿನಿಯರ್ ಸಿಂಧು, ಕಾರ್ಯನಿರ್ವಾಹಕ ಇಂಜಿನಿಯರ್ ಶ್ರೀನಿವಾಸ್, ವಾಣಿ ವಿಲಾಸ್ ನೀರು ಸರಬರಾಜು ವಿಭಾಗದ ಮೋಹನ್‌ಕುಮಾರ್, ಎಇಇ ಮುಸ್ತಫಾ, ವಲಯ ಅಭಿವೃದ್ಧಿ ಅಧಿಕಾರಿ ಸತ್ಯಮೂರ್ತಿ, ವಲಯ ಆಯುಕ್ತ ಸಂದೀಪ್, ಇಂಜಿನಿಯರ್ ಮಧುಸೂದನ್, ತೇಜಸ್ವಿನಿ ಸೇರಿದಂತೆ ಸೆಸ್ಕ್, ಕಂದಾಯ ಇಲಾಖೆ, ಆಹಾರ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆಯ ಅಧಿಕಾರಿಗಳು ಇದ್ದರು.
ಇಂದಿರಾ ಗಾಂಧಿ ಬ್ಲಾಕ್ ಅಧ್ಯಕ್ಷ ರವಿ ಮಂಚೇಗೌಡನ ಕೊಪ್ಪಲು, ದೇವರಾಜ ಬ್ಲಾಕ್ ಅಧ್ಯಕ್ಷ ಡಿ.ನಾಗಭೂಷಣ್, ವಾರ್ಡ್ ಅಧ್ಯಕ್ಷ ಹರೀಶ್, ಮುಖಂಡರಾದ ರಾಜಣ್ಣ, ಭಾಸ್ಕರ್, ಬಸವರಾಜು, ಬರಕ್ಕಿ ಮಾದೇವಣ್ಣ, ಚೆನ್ನಪ್ಪ, ನಾಗಣ್ಣ, ಬಂದೀಗೌಡ , ಕುಮಾರಣ್ಣ (ದತ್ತು), ಶ್ರೀನಿವಾಸ್, ಪ್ರದೀಪ್ (ದೀಪು), ದೀಪು (ನಂಜುಂಡಸ್ವಾಮಿ), ಗಿರೀಶ್, ಮಹೇಶ್, ಚಂದ್ರು ಇತರರು ಇದ್ದರು.