ಹಾರನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಕೆ.ವೆಂಕಟೇಶ್, ಈರೇಗೌಡ, ನಿತಿನ್ ವೆಂಕಟೇಶ್, ಜಯಲಕ್ಷ್ಮಮ್ಮ, ರತ್ನಮ್ಮ, ಬಿ.ಎ.ಪ್ರಕಾಶ್, ಇ.ಪಿ.ಲೋಕೇಶ್, ಅನಿಲ್ ಕುಮಾರ್ ಇತರರಿದ್ದರು. 
ಮೈಸೂರು

ಹೈನುಗಾರಿಕೆಗೆ ಸರ್ಕಾರದಿಂದ ಹೆಚ್ಚಿನ ಉತ್ತೇಜನ

ಪ್ರಮುಖ ಮುಖ್ಯಾಂಶಗಳು

  • ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್
  • ಹಾರನಹಳ್ಳಿ ಗ್ರಾಮ
  • ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ
ಬೆಟ್ಟದಪುರ: ರಾಜ್ಯದಲ್ಲಿ ಹೈನುಗಾರಿಕೆ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹೆಚ್ಚಿನ ಉತ್ತೇಜನ ನೀಡುತ್ತಿದೆ ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಹೇಳಿದರು.
ಸಮೀಪದ ಹಾರನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಹಾಲು ಒಕ್ಕೂಟದಲ್ಲಿ ಒಂದು ದಿನಕ್ಕೆ 1.4 ಕೋಟಿ ಲೀ. ಹಾಲು ಸಂಗ್ರಹವಾಗುತ್ತಿದೆ. ಅದರಲ್ಲಿ 60 ಲಕ್ಷ ಲೀ. ಹಾಲು ಮಾರಾಟವಾಗುತ್ತದೆ. ಉಳಿದ ಹಾಲಿನಲ್ಲಿ ವಿವಿಧ ಬಗೆಯ ಉತ್ಪನ್ನಗಳನ್ನು ತಯಾರು ಮಾಡಲಾಗುತ್ತದೆ. ಅಲ್ಲದೆ ಹಾಲು ಉತ್ಪಾದಕರಿಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುತ್ತಿದ್ದು, ನಂದಿನಿ ಉತ್ಪನ್ನಗಳಿಗೆ ದೇಶದಲ್ಲೇ ಬೇಡಿಕೆ ಇದೆ ಎಂದರು.
ಮೈಮುಲ್ ಅಧ್ಯಕ್ಷ ಈರೇಗೌಡ ಮಾತನಾಡಿ, ಪಿರಿಯಾಪಟ್ಟಣ ತಾಲೂಕು ಹಾಲು ಉತ್ಪಾದನೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಸಚಿವರ ಶಿಫಾರಸ್ಸಿನ ಮೇರೆಗೆ ಬಿಎಂಸಿ ಕೇಂದ್ರವನ್ನು ಶೀಘ್ರ ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿದರು.
ತಾಲೂಕು ಆಶ್ರಯ ಸಮಿತಿ ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಸಂಘದ ಅಧ್ಯಕ್ಷೆ ಜಯಲಕ್ಷ್ಮಮ್ಮ, ಉಪಾಧ್ಯಕ್ಷೆ ರತ್ನಮ್ಮ, ಮೈಮುಲ್ ನಿರ್ದೇಶಕ ಬಿ.ಎ.ಪ್ರಕಾಶ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಇ.ಪಿ.ಲೋಕೇಶ್, ಕೆಪಿಸಿಸಿ ಸದಸ್ಯ ಅನಿಲ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಹಮತಜಾನ್ ಬಾಬು, ಡಿ.ಟಿ ಸ್ವಾಮಿ, ಶೇಖರ್, ಗ್ರಾಪಂ ಉಪಾಧ್ಯಕ್ಷ ಅನಿಲ್ ಕುಮಾರ್, ಮುಖಂಡರಾದ ಕೆ.ಟಿ ನಾಗೇಂದ್ರ, ಹಾ.ಬಾ.ಯೋಗೇಶ್ ಗೌಡ, ಎಚ್.ಜೆ ಮಂಜುನಾಥ್, ವಿಸ್ತರಣಾಧಿಕಾರಿಗಳಾದ ಆಕಾಶ್, ಸತೀಶ್, ಸಂಘದ ಸಿಇಒ ಕುಮಾರಿ ಇತರರಿದ್ದರು.