ಪಿರಿಯಾಪಟ್ಟಣದ ಡಿ.ದೇವರಾಜ ಅರಸು ಕಲಾಭವನದಲ್ಲಿ ಭಾರತ ಸರ್ಕಾರದ ಅಡಿಪ್ ಯೋಜನೆಯಡಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸವಲತ್ತು ವಿತರಿಸಿದರು. ಮಾಜಿ ಶಾಸಕ ಎಲ್.ನಾಗೇಂದ್ರ, ಮೈಸೂರು ಜಿಲ್ಲಾ ಬಿಜೆಪಿ ಗ್ರಾಮಾಂತರ ಘಟಕದ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ವಿ.ರಾಜೇಂದ್ರ, ರಾಜೇಗೌಡ ಇತರರು ಇದ್ದರು.  
ಮೈಸೂರು

ಅಂಗವಿಕಲರ ಜೀವನ ಭದ್ರತೆಗೆ ಪ್ರೇರಣೆ

ಪ್ರಮುಖ ಮುಖ್ಯಾಂಶಗಳು

  • ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯ
  • 18 ಲಕ್ಷ ರೂ.ವೆಚ್ಚದಲ್ಲಿ ವಿವಿಧ ಸವಲತ್ತು ವಿತರಣೆ
ಪಿರಿಯಾಪಟ್ಟಣ: ಅಂಗವಿಕಲರಲ್ಲಿ ಸಾಮಾನ್ಯರಿಗಿಂತಲೂ ಹೆಚ್ಚು ಪ್ರತಿಭೆ, ಆತ್ಮಸ್ಥೈರ್ಯ ಇರುತ್ತದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಪಟ್ಟಣದ ಡಿ.ದೇವರಾಜ ಅರಸು ಕಲಾಭವನದಲ್ಲಿ ಭಾರತ ಸರ್ಕಾರದ ಅಡಿಪ್ ಯೋಜನೆಯಡಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಸವಲತ್ತು ವಿತರಿಸಿ ಮಾತನಾಡಿದರು. ವಿಕಸಿತ ಭಾರತದ ಪರಿಕಲ್ಪನೆಯಡಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುತ್ತಿದ್ದಾರೆ. ಈ ಕಾರ್ಯಕ್ಕೆ ಅಂಗವಿಕಲರೂ ಕೈಜೋಡಿಸಬೇಕು ಎಂದು ತಿಳಿಸಿದರು.
ದೇಶದ ಜನಸಂಖ್ಯೆಯಲ್ಲಿ ಶೇ.5 ರಷ್ಟು ಜನ ಅಂಗವಿಕಲರು ಇದ್ದಾರೆ. ಕೆಲವರಿಗೆ ಹುಟ್ಟಿನಿಂದಲೇ ಅಂಗವೈಕಲ್ಯ ಕಾಣಿಸಿಕೊಳ್ಳುತ್ತದೆ. ಸಮಾಜ ಅವರಿಗೆ ಶಕ್ತಿ, ಆತ್ಮಸ್ಥೈರ್ಯ ನೀಡಿದರೆ ಉತ್ತಮ ಜೀವನ ಕಟ್ಟಿಕೊಳ್ಳುತ್ತಾರೆ ಎಂದರು.
ಅಂಗವಿಕಲರೂ ಸಾಮಾನ್ಯರಂತೆ ಜೀವನ ನಡೆಸಬೇಕು ಎಂಬ ಉದ್ದೇಶದಿಂದ ಪಿರಿಯಾಪಟ್ಟಣ ತಾಲೂಕಿನಲ್ಲಿ 18 ಲಕ್ಷ ರೂ.ವೆಚ್ಚದಲ್ಲಿ ವ್ಹೀಲ್‌ಚೇರ್, ಟರ‌್ರಸೈಕಲ್, ಬ್ಯಾಟರಿ ಚಾಲಿತ ವಾಹನ, ವಾಕರ್, ಸ್ಟಿಕ್‌ಗಳು, ಶ್ರವಣ ಸಾಧನಗಳು ಸೇರಿದಂತೆ ಇನ್ನಿತರ ಉಪಕರಣಗಳು ವಿತರಿಸಲಾಗುತ್ತಿದೆ. ಆ ಮೂಲಕ ಅಂಗವಿಕಲರ ಜೀವನವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರೇರಣೆ ನೀಡಲಾಗುತ್ತಿದೆ ಎಂದರು.
ಮಾಜಿ ಶಾಸಕ ಎಲ್.ನಾಗೇಂದ್ರ, ಮೈಸೂರು ಜಿಲ್ಲಾ ಬಿಜೆಪಿ ಗ್ರಾಮಾಂತರ ಘಟಕದ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ತಾಲೂಕು ಘಟಕದ ಅಧ್ಯಕ್ಷ ವಿ.ರಾಜೇಂದ್ರ, ಬಿಜೆಪಿ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎಂ.ಎಂ.ರಾಜೇಗೌಡ, ಜೆಡಿಎಸ್ ತಾಲೂಕು ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಮುಖಂಡರಾದ ಆರ್.ಟಿ.ಸತೀಶ್, ಪಿ.ಜೆ.ರವಿ, ವಿಕ್ರಂ ರಾಜ್, ಪರೀಕ್ಷಿತ್ ರಾಜ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಘವೇಂದ್ರ, ಸಿಡಿಪಿಒ ವೀಣಾ, ಲಕ್ಷ್ಮೀ ಇತರರು ಇದ್ದರು.