ಮೂಗೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಗಮನಸೆಳೆದ ವಿವಿಧ ವೇಷಧಾರಿ ಮಕ್ಕಳು. 
ಮೈಸೂರು

ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ವೇದಿಕೆ

ಮೂಗೂರು: ಮಕ್ಕಳಲ್ಲಿನ ಬೌದ್ಧಿಕ ಬೆಳವಣಿಗೆ ಜತೆಗೆ ಅವರಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿವೆ ಎಂದು ಕ್ಷೇತ್ರ ಸಂಪನ್ಮೂಲ ಅಧಿಕಾರಿ ಕೆ.ಪಿ.ಮಹದೇವ ಸ್ವಾಮಿ ಹೇಳಿದರು.
ಮೂಗೂರು ಕರ್ನಾಟಕ ಪಬ್ಲಿಕ್ ಶಾಲೆ, ಬಾಲಕರ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಮೂಗೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ಮಾರ್ಗದರ್ಶನ ಮತ್ತು ಅವಕಾಶಗಳನ್ನು ಒದಗಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಹತ್ತರ ಪಾತ್ರ ವಹಿಸಲಿವೆ ಶಿಕ್ಷಕರು, ಪಾಲಕರು ಮಕ್ಕಳಿಗೆ ಸಂಸ್ಕಾರದ ಜತೆಗೆ ಶಿಕ್ಷಣ ಕಡೆಗೆ ಗಮನ ಹರಿಸಬೇಕು ಎಂದರು.
11 ಪ್ರಾಥಮಿಕ ಶಾಲೆಗಳ ಮಕ್ಕಳು ಭಾಗವಹಿಸಿದ್ದರು. ಜಾನಪದ ನೃತ್ಯ, ಚಿತ್ರಕಲೆ, ಧಾರ್ಮಿಕ ಪಠಣ, ಮಿಮಿಕ್ರಿ, ಚರ್ಚಾಸ್ಪರ್ಧೆ, ಕವನ ವಾಚನ, ಆಶುಭಾಷಣ, ವೇಷ ಭೂಷಣ ಸ್ಪರ್ಧೆಗಳು ನಡೆದವು. ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷೆ ರಶ್ಮಿ ರಾಜು, ಬಾಲಚಂದ್ರ, ಇಸಿಒ ಬಸವರಾಜು, ಸಿಆರ್‌ಪಿ ಶಿವರಾಜು, ಮುಖ್ಯ ಶಿಕ್ಷಕಿ ಮಂಜುಳಾ ಬಾಯಿ, ರುಕ್ಮಿಣಮ್ಮ, ಶಲೀನಾ, ಕೃಷ್ಣೇಗೌಡ, ಸುಮಾ, ಹೊಸಹಳ್ಳಿ ರವಿ, ವಿವಿಧ ಶಾಲೆಗಳ ಶಿಕ್ಷಕರು ಉಪಸ್ಥಿತರಿದ್ದರು.