- ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗಳನ್ನು ಈ ವರ್ಷದ ನವೆಂಬರ್‌ನಲ್ಲಿ ನಡೆಸಲಾಗುವುದು
- ಗಣತಿ ಕಾರ್ಯಕ್ಕೂ ಮುನ್ನವೇ ಮೈಸೂರು ನಗರಪಾಲಿಕೆಗೆ ಚುನಾವಣೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ
ಮೈಸೂರು: ಗಣತಿ ಕಾರ್ಯ ನಡೆಯುತ್ತಿರುವುದರಿಂದ ಬೃಹತ್ ಮೈಸೂರು ನಗರ ಪಾಲಿಕೆ ಮಾಡುವ ಪ್ರಕ್ರಿಯೆಗೆ ರಾಜ್ಯಪಾಲರು ಸಮ್ಮತಿ ನೀಡಿಲ್ಲ. ಹಾಗಾಗಿ ಗಣತಿ ಕಾರ್ಯಕ್ಕೂ ಮುನ್ನವೇ ಈಗ ಇರುವ ನಗರಪಾಲಿಕೆಗೆ ಚುನಾವಣೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ತಿಳಿಸಿದರು.
ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗಳನ್ನು ಈ ವರ್ಷದ ನವೆಂಬರ್‌ನಲ್ಲಿ ನಡೆಸಲಾಗುವುದು. ಹಾಗೆಯೇ ಗ್ರಾಮ ಪಂಚಾಯಿತಿ ಚುನಾವಣೆಗಳನ್ನೂ ಇದೇ ವರ್ಷ ನಡೆಸಲು ಗ್ರಾಮೀಣಾಭಿವೃದ್ಧಿ ಸಚಿವರು ಒಲವು ತೋರಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಆದರೆ ಮೈಸೂರು ನಗರ ಪಾಲಿಕೆ ಚುನಾವಣೆ ವಿಳಂಬಕ್ಕೆ ಕಾರಣ ಮೈಸೂರನ್ನು ಬೃಹತ್ ಮೈಸೂರು ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಗಣತಿ ಪ್ರಕ್ರಿಯೆ ಚಾಲ್ತಿಯಲ್ಲಿರುವುದರಿಂದ ಯಾವುದೇ ಬದಲಾವಣೆ ಮಾಡಲು ಬರುವುದಿಲ್ಲ ಎಂದು ರಾಜ್ಯಪಾಲರು ತಿಳಿಸಿದ್ದರಿಂದ ಚುನಾವಣೆ ವಿಳಂಬವಾಗಿದೆ. ಆಗಾಗಿ ಈಗ ಗಣತಿ ಮುಗಿಯುವವರೆಗೆ ಕಾಯದೆ ಶೀಘ್ರದಲ್ಲೇ ಮುಖ್ಯಮಂತ್ರಿ ಹಾಗೂ ಪಕ್ಷದ ನಾಯಕರೊಂದಿಗೆ ಚರ್ಚಿಸಿ ಚುನಾವಣೆ ನಡೆಸಲು ಚಿಂತಿಸಿರುವುದಾಗಿ ಹೇಳಿದರು.