ಸಮಾಜ ಕಲ್ಯಾಣ ಇಲಾಖೆ ನೌಕರರು ಆಯೋಜಿಸಿದ್ದ ‘ಮುಟ್ಟಿಸಿಕೊಂಡವನು’ ನಾಟಕ ಪ್ರದರ್ಶನ ಸಮಯದಲ್ಲಿ ಕಲಾವಿದರೊಂದಿಗೆ ಡಾ.ಎಚ್.ಸಿ.ಮಹದೇವಪ್ಪ, ಡಾ.ಡಿ.ತಿಮ್ಮಯ್ಯ ಇದ್ದರು.
- ಧರ್ಮ ಮತ್ತು ಜಾತಿ ದೇಶದ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಮಾರಕವಾಗುತ್ತದೆ ಎನ್ನುವುದನ್ನು ತಿಳಿಸಿಕೊಟ್ಟಿದೆ
- ಜಾತಿ ವ್ಯವಸ್ಥೆಯಿಂದ ಹೊರಬರಬೇಕು ಎಂಬ ಸಾಮಾಜಿಕ ಸಂದೇಶಗಳನ್ನು ಅಭಿವ್ಯಕ್ತಗೊಳಿಸುತ್ತದೆ
ಮೈಸೂರು:ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಹಾಗೂ ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆ ನೌಕರರು ‘ಮುಟ್ಟಿಸಿಕೊಂಡವನು’ ನಾಟಕ ಪ್ರದರ್ಶಿಸಿದರು.
ಕಲಾಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಿ.ಲಂಕೇಶ್ ಕಥೆ ಆಧಾರಿತ ಈ ನಾಟಕವನ್ನು ರಂಗಾಂತರಂಗ ಟ್ರಸ್ಟ್‌ನ ಕೆ.ಎಂ.ಕೀರ್ತಿರಾಜ್ ನಿರ್ದೇಶಿಸಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ, ಧರ್ಮ ಮತ್ತು ಜಾತಿ ದೇಶದ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಮಾರಕವಾಗುತ್ತದೆ ಎಂಬ ಸಂದೇಶವನ್ನು ನಾಟಕ ಮನೋಜ್ಞವಾಗಿ ಬಿಂಬಿಸಿದೆ ಎಂದು ಹೇಳಿದರು.
ಜಾತಿ ವ್ಯವಸ್ಥೆಯಲ್ಲಿ ಜನರನ್ನು ಈ ಸಮಾಜ ಹೇಗೆ ನೋಡಿಕೊಳ್ಳುತ್ತದೆ ಎಂಬುದನ್ನು ಮುಟ್ಟಿಸಿಕೊಂಡವನು ನಾಟಕ ತಿಳಿಸುತ್ತದೆ. ಜಾತಿ ವ್ಯವಸ್ಥೆಯಿಂದ ಹೊರಬರಬೇಕು ಎಂಬ ಸಾಮಾಜಿಕ ಸಂದೇಶಗಳನ್ನು ಅಭಿವ್ಯಕ್ತಗೊಳಿಸುತ್ತದೆ ಎಂದರು.
ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಸಮಾಜ ಕಲ್ಯಾಣ ಸಚಿವರ ವಿಶೇಷ ಕರ್ತವ್ಯಾಧಿಕಾರಿ ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಂಗೇಗೌಡ, ಸಹಾಯಕ ನಿರ್ದೇಶಕರಾದ ಜನಾರ್ದನ್, ಮುನಿರಾಜು, ಮುಖಂಡರಾದ ದೇವನೂರು ಬಸವರಾಜು, ತುಕಾರಾಂ ಇತರರು ಇದ್ದರು.