ಮೈಸೂರಿನಲ್ಲಿ ಕಳುವಾಗಿದ್ದ 16 ಬೈಕ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ
ಮೈಸೂರು: ಜಿಲ್ಲೆಯ ವಿವಿಧ ಕಡೆಗಳಲ್ಲಿ ನಡೆದ ವಾಹನ ಕಳವು ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಒಟ್ಟು 16ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಕೆ.ಆರ್. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳುವಾಗಿದ್ದ 6 ಬೈಕ್‌ಗಳನ್ನು ವಶಕ್ಕೆ ಪಡೆದು 3 ಆರೋಪಿಗಳನ್ನು ಬಂಧಿಸಲಾಗಿದೆ. ಅದೇ ರೀತಿ ಮೈಸೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳುವಾಗಿದ್ದ 9 ಬೈಕ್‌ಗಳನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿಸಲಾಗಿದೆ. ಹುಣಸುರು ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ಕಳುವಾಗಿದ್ದ 1 ಬೈಕ್‌ವೊಂದನ್ನು ವಶಕ್ಕೆ ಪಡೆದು ಆರೋಪಿಯೊಬ್ಬನನ್ನು ಬಂಧಿಸಲಾಗಿದೆ. ಬೆಟ್ಟದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳುವಾಗಿದ್ದ ಟಾಟಾ ಏಸ್ ವಾಹನವನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.