ಕೆ.ಆರ್.ನಗರದ ನಾಮಧಾರಿಗೌಡರ ಸಮುದಾಯ ಭವನದಲ್ಲಿ ಅಖಿಲ ನಾಮಧಾರಿಗೌಡ ಸಂಘದ 25ನೇ ವರ್ಷದ ಬೆಳ್ಳಿ ಹಬ್ಬದ ಕಾರ್ಯಕ್ರಮದ ಹಾಗೂ ಸಂಘದ ವಾರ್ಷಿಕ ಮಹಾಸಭೆಯ ಆಹ್ವಾನ ಪತ್ರಿಕೆಯನ್ನು ಸಂಘದ ಅಧ್ಯಕ್ಷ ಕೆ.ಆರ್.ಅಶೋಕ್ ಕುಮಾರ್ ಬಿಡುಗಡೆ ಮಾಡಿದರು. ಗಡ್ಡಮಹೇಶ್, ನಟರಾಜು, ಕಟ್ನಾಳು ಎಲ್.ಹೇಮಂತಕುಮಾರ್, ಕೆ.ಆರ್.ಗಿರೀಶ್, ಪುರಷೋತ್ತಮ, ಎಂ.ಆರ್.ಪುಟ್ಟರಾಜು, ಕೃಷ್ಣೇಗೌಡ ಇನ್ನಿತರರು ಇದ್ದರು.
ಕೆ.ಆರ್.ನಗರ: ಅಖಿಲ ನಾಮಧಾರಿಗೌಡ ಸಂಘದ 25ನೇ ವರ್ಷದ ಬೆಳ್ಳಿ ಹಬ್ಬದ ಕಾರ್ಯಕ್ರಮ ಹಾಗೂ ಸಂಘದ ವಾರ್ಷಿಕ ಮಹಾಸಭೆಯನ್ನು ಜ.11ರಂದು ಬೆಳಗ್ಗೆ 10 ಗಂಟೆಗೆ ಹುಣಸೂರು ರಸ್ತೆಯಲ್ಲಿರುವ ಸಂಘದ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಆರ್.ಅಶೋಕ್ ಕುಮಾರ್ ಹೇಳಿದರು.
ಪಟ್ಟಣದ ನಾಮಧಾರಿಗೌಡರ ಸಮುದಾಯ ಭವನದಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿ, ಸಮಾರಂಭದ ಉದ್ಘಾಟನೆಯನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೆರವೇರಿಸಲಿದ್ದು, ಶಾಸಕ ಡಿ.ರವಿಶಂಕರ್ ಸಾಧಕರಿಗೆ ಸನ್ಮಾನ ಮಾಡಲಿದ್ದಾರೆ. ಮಾಜಿ ಸಚಿವ ಸಾ.ರಾ.ಮಹೇಶ್ ಮತ್ತು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳನ್ನು ಅಭಿನಂದಿಸಲಿದ್ದಾರೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ, ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ದೊಡ್ಡಸ್ವಾಮೇಗೌಡ, ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್, ಅಖಿಲ ನಾಮಧಾರಿಗೌಡ ಕೇಂದ್ರ ಸಮಿತಿ ಅಧ್ಯಕ್ಷ ಕೆ.ಟಿ.ಗೋವಿಂದರಾಜು, ಮಾಜಿ ಅಧ್ಯಕ್ಷರಾದ ಡಿ.ಸುಂದರ್ ದಾಸ್, ಪಿ.ಚನ್ನರೇವಣ್ಣ, ಸಿ.ಜೆ.ನಾಗರಾಜು, ಕೆ.ಆರ್.ನಗರ ತಾಲೂಕು ಸಂಘದ ಮಾಜಿ ಅಧ್ಯಕ್ಷರಾದ ವೈ.ಎಸ್.ವಸಂತಕುಮಾರ್, ಕೆ.ಆರ್.ರಾಜಣ್ಣ, ಕೆ.ವಿ.ನೀಲಕಂಠೇಗೌಡ, ಎನ್.ಎ.ರಾಮಸ್ವಾಮಿ ಮುಂತಾದವರು ಆಗಮಿಸಲಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ ನಮ್ಮ ಸಮುದಾಯ ಭವನ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡಿದ ಸಮಾಜದ 270ಕ್ಕೂ ಹೆಚ್ಚು ಮಂದಿಗೆ ಸನ್ಮಾನ ಮಾಡಿ ಗೌರವಿಸಲು ನಿರ್ಧರಿಸಿದ್ದು, ಈಗಾಗಲೇ ಸಂಘದಿಂದ ಮಾಹಿತಿ ನೀಡಲಾಗಿದೆ ಎಂದು ಹೇಳಿದ ಅಧ್ಯಕ್ಷರು, ಈ ಬೆಳ್ಳಿ ಹಬ್ಬದ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲು ಸಮುದಾಯದವರು ಎಲ್ಲ ರೀತಿಯ ಸಹಕಾರ ನೀಡಿ, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಮಾಡಿದರು.
ಅಖಿಲ ನಾಮಧಾರಿಗೌಡ ಸಂಘದಿಂದ ಹೊರ ತರಲಾಗಿರುವ ನೂತನ ದಿನದರ್ಶಿಕೆಯನ್ನು ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಡ್ಡಮಹೇಶ್, ಪುರಸಭಾ ಮಾಜಿ ಸದಸ್ಯ ನಟರಾಜು, ವಿಕಲ ಚೇತನ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ತಾಲೂಕು ಸಂಯೋಜಕ ಕಟ್ನಾಳು ಎಲ್.ಹೇಮಂತಕುಮಾರ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.
ಸಂಘದ ಉಪಾಧ್ಯಕ್ಷ ಕೆ.ಆರ್.ಗಿರೀಶ್, ಕಾರ್ಯದರ್ಶಿ ಪುರುಷೋತ್ತಮ, ನಿಕಟಪೂರ್ವ ಕಾರ್ಯದರ್ಶಿ ಎಂ.ಆರ್.ಪುಟ್ಟರಾಜು, ಖಜಾಂಚಿ ಕೃಷ್ಣೇಗೌಡ, ನಿರ್ದೇಶಕರಾದ ಎಸ್.ರುಕ್ಮಾಂಗದ, ಎನ್.ಡಿ.ಗೋವಿಂದರಾಜು, ಕೆ.ಎಸ್.ಸುಮಂತ್, ಕೆ.ಬಿ.ಪ್ರಕಾಶ್, ಕೆ.ಎನ್.ನಂಜೇಗೌಡ, ಡಿ.ನಟರಾಜು, ಜಯಪ್ರಕಾಶ್, ಎಂ.ಪಿ.ನಂಜುಂಡ, ಎಸ್.ಕೆ.ವೆಂಕಟೇಶ್ ಇದ್ದರು.