ಮೈಸೂರಿನ ಲಾಲ್ ಬಹಾದ್ದೂರ್ ಶಾಸ್ತ್ರಿನಗರ ಬಡಾವಣೆಯಲ್ಲಿ ಶನಿವಾರ ಬೀದಿ ನಾಯಿಗಳ ದಾಳಿಗೆ ಒಳಗಾಗಿ ಮೃತಪಟ್ಟ ಜಿಂಕೆ
ಮೈಸೂರು: ಕಾಡಿನಿಂದ ತಪ್ಪಿಸಿಕೊಂಡು ನಾಡಿಗೆ ಬಂದ ಗಂಡು ಜಿಂಕೆಯೊಂದು ಶನಿವಾರ ಬೀದಿ ನಾಯಿಗಳ ದಾಳಿಗೆ ಸಿಲುಕಿ ಸಾವನ್ನಪ್ಪಿದೆ.
ನಗರದ ಹೊರವಲಯದ ಲಾಲ್ ಬಹಾದ್ದೂರ್ ಶಾಸ್ತ್ರಿನಗರ ಬಡಾವಣೆಯಲ್ಲಿ ಮಧ್ಯಾಹ್ನ ನಾಯಿಗಳು ದಾಳಿ ನಡೆಸಿದ ಪರಿಣಾಮ ತೀವ್ರ ಗಾಯಗೊಂಡ ಜಿಂಕೆ ಸಾವನ್ನಪ್ಪಿತು. ನಾಯಿಗಳ ಹಿಡಿತದಿಂದ ತಪ್ಪಿಸಿಕೊಳ್ಳಲಾಗದ ಜಿಂಕೆ ಕಿರುಚಿಕೊಂಡ ಸಂದರ್ಭ ಸಾರ್ವಜನಿಕರು ನಾಯಿಗಳಿಂದ ಜಿಂಕೆ ರಕ್ಷಿಸಲು ಮುಂದಾಗಿದ್ದಾರೆ. ಆದರೆ, ಅಷ್ಟು ಹೊತ್ತಿಗಾಗಲೇ ತೀವ್ರ ಗಾಗಯೊಂಡಿದ್ದ ಜಿಂಕೆಯನ್ನು ಉಳಿಸಲು ಸಾಧ್ಯವಾಗಲಿಲ್ಲ.
ಸ್ಥಳಕ್ಕೆ ಆಲನಹಳ್ಳಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ನಂತರ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳ ಮಹಜರು ನಡೆಸಿ ಜಿಂಕೆಯನ್ನು ಕೊಂಡೊಯ್ದು ಅಂತ್ಯಕ್ರಿಯೆ ನಡೆಸಿದರು.