ದ್ವಿತೀಯ ಪಿಯುಸಿ ಪರೀಕ್ಷೆ ಸಿದ್ಧತೆ ಕುರಿತು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸಭೆ ನಡೆಸಿದರು. 
ಮೈಸೂರು

ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆ ಸಿದ್ಧತೆಗೆ ಸಭೆ

ಮೈಸೂರು: ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸಲು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಹೇಳಿದರು.
ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸರಾಗವಾಗಿ ನಡೆಯುವಂತೆ ಮಾಡಲು ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಂಡು ವಿದ್ಯಾರ್ಥಿ ಸ್ನೇಹಿ ಪೂರಕ ವಾತಾವರಣ ನಿರ್ಮಿಸಿ ಯಾವುದೇ ಗೊಂದಲಗಳಿಗೆ ಎಡೆ ಮಾಡಿಕೊಡದೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ನಡೆಸಬೇಕು ಎಂದರು.
ಫೆ.29 ರಿಂದ ಮಾ.17 ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ 51 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.