ಅಗ್ನಿ ದುರಂತಕ್ಕೆ ಒಳಗಾದ ಮಾರಾ ರೆಸ್ಟೋ ಪಬ್
ಮೈಸೂರು: ದಟ್ಟಗಳ್ಳಿಯ ರಿಂಗ್ ರಸ್ತೆಯ ಮಾರಾ ರೆಸ್ಟೋ ಪಬ್‌ನಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಯ 5 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಕಟ್ಟಡದ ರೂಪ್‌ಟಾಪ್‌ನಲ್ಲಿ ಬಿದಿರು, ಒಣ ಹುಲ್ಲು ಬಳಕೆ ಮಾಡಿ ಬಾರ್ ಆ್ಯಂಡ್ ರೆಸ್ಟೋರೆಂಟ್ ನಡೆಸಲಾಗುತಿತ್ತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸೋಮವಾರ ರೆಸ್ಟೋ ಪಬ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಿದಿರು ಹಾಗೂ ಒಣ ಹುಲ್ಲು ಇದ್ದ ಹಿನ್ನೆಲೆಯಲ್ಲಿ ಬೆಂಕಿ ಬೇಗನೆ ಹರಡಿಕೊಂಡಿತು.
ರೆಸ್ಟೋ ಪಬ್ ನಡೆಸಲು ಅನುಮತಿ ಪಡೆದಿರಲಿಲ್ಲ. ಹೀಗಿದ್ದರೂ ಪಬ್ ಮಾಲೀಕರ ವಿರುದ್ಧ ಅಬಕಾರಿ ಅಧಿಕಾರಿಗಳು ಯಾವುದೇ ಕಾನೂನು ಕ್ರಮ ಕೈಗೊಂಡಿರಲಿಲ್ಲ. ಕರ್ತವ್ಯಲೋಪವೆಸಗಿದ ಆರೋಪದ ಮೇರೆಗೆ ಮೈಸೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕ, ಮೈಸೂರು ವಲಯ-3ರ ಅಬಕಾರಿ ನಿರೀಕ್ಷಕ, ಅಬಕಾರಿ ಉಪನಿರೀಕ್ಷಕ- 1, ಅಬಕಾರಿ ಉಪನಿರೀಕ್ಷಕ-2 ಹಾಗೂ ಅಬಕಾರಿ ಪೇದೆ (ಬೀಟ್‌ಕಾನ್ಸಟೇಬಲ್) ಸೇರಿದಂತೆ ಒಟ್ಟು 5 ಜನರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಪಡಿಸಿ ಅಬಕಾರಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.