ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಮಾಜಿ ಅಧ್ಯಕ್ಷ ಓಂಕಾರಪ್ಪ ನಿಧನಕ್ಕೆ ಸಂಸ್ಥೆಯ ಕಚೇರಿಯಲ್ಲಿ ಸಂತಾಪ ಸಲ್ಲಿಸಲಾಯಿತು. ಕೆ.ಬಿ.ಲಿಂಗರಾಜು, ಆರ್.ಆನಂದ್, ಎ.ಕೆ ಶಿವಾಜಿ ರಾವ್ ಹಾಗೂ ಇತರರು ಇದ್ದರು. 
ಮೈಸೂರು

ಓಂಕಾರಪ್ಪ ನಿಧನಕ್ಕೆ ಗಣ್ಯರ ಶ್ರದ್ಧಾಂಜಲಿ

ಎಂ.ರವಿ
ಮೈಸೂರು: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಮಾಜಿ ಅಧ್ಯಕ್ಷ ಓಂಕಾರಪ್ಪ ನಿಧನಕ್ಕೆ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಸೋಮವಾರ ಸಂತಾಪ ಸಭೆ ನಡೆಸಿ ಶ್ರದ್ಧಾಂಜಲಿ ಅರ್ಪಿಸಿದರು. 
ಸಂಸ್ಥೆಯ ಅಧ್ಯಕ್ಷ. ಕೆ.ಬಿ.ಲಿಂಗರಾಜು ಮಾತನಾಡಿ, ಓಂಕಾರಪ್ಪ  1997-1998 ಸಾಲಿನಲ್ಲಿ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರ ಅವಧಿಯಲ್ಲಿ ಸಂಸ್ಥೆಯನ್ನು ಉನ್ನತ ಸ್ಥಾನಕ್ಕೆ ಏರಿಸಿದರು. ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಎರಡು ಬಾರಿ ಆಯ್ಕೆಯಾಗಿದ್ದರು. ಮೈಸೂರು ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್, ಮೈಸೂರು ಗ್ರೇನ್ ಮರ್ಚೆಂಟ್ಸ್ ಅಸೋಸಿಯೇಷನ್, ತರಳಬಾಳು ಸಮಾಗಮ ಸಂಸ್ಥೆಗಳಿಗೆ ಅಧ್ಯಕ್ಷರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು ಎಂದು ಸ್ಮರಿಸಿದರು.
ಸಂಸ್ಥೆಯ ಮಾಜಿ ಅಧ್ಯಕ್ಷ ಸುಧಾಕರ್ ಎಸ್.ಶೆಟ್ಟಿ, ಉಪಾಧ್ಯಕ್ಷ ಆರ್.ಆನಂದ್, ಗೌರವ ಕಾರ್ಯದರ್ಶಿ ಎ.ಕೆ.ಶಿವಾಜಿ ರಾವ್, ಖಜಾಂಚಿ ಎಸ್.ಜೆ.ಅಶೋಕ್, ಗೌರವ ಜಂಟಿ ಕಾರ್ಯದರ್ಶಿ ವಿನೋದ್ ಜೈನ್ ಹಾಗೂ ಇತರರು ಇದ್ದರು.