ಬಾಳುಗೋಡುವಿನ ಕೊಡವ ಸಮಾಜಗಳ ಒಕ್ಕೂಟದ 12ನೇ ವರ್ಷದ ಕೊಡವ ನಮ್ಮೆಗೆ ಚಾಲನೆ ನೀಡಲಾಯಿತು. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಎ.ಎಸ್.ಪೊನ್ನಣ್ಣ, ಅರುಣ್ ಮಾಚಯ್ಯ, ದಾದ ಬೆಳ್ಯಪ್ಪ, ಜಗದೀಶ್ ಇದ್ದರು. 
ಮೈಸೂರು

ಕೊಡವರಿಂದ ಸಂಸ್ಕೃತಿ, ಪರಂಪರೆ ರಕ್ಷಣೆ

ಎಂ.ರವಿ
ವಿರಾಜಪೇಟೆ: ಕೊಡಗಿನಲ್ಲಿ ಕೊಡವರು ತಮ್ಮ ಸಂಸ್ಕೃತಿ ಮತ್ತು ಪಾರಂಪರಿಕತೆಯನ್ನು ಇಂದಿಗೂ ಕಾಪಾಡಿಕೊಂಡು ಬರುತ್ತಿರುವುದು ಸಂತಸ ತಂದಿದೆ ಎಂದು ಕೊಡಗು ಮೈಸೂರು ಕ್ಷೇತ್ರದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಬಾಳುಗೋಡುವಿನ ಕೊಡವ ಸಮಾಜಗಳ ಒಕ್ಕೂಟದ 12 ನೇ ವರ್ಷದ ಕೊಡವ ನಮ್ಮೆಯಲ್ಲಿ ಗುರುವಾರ ಭಾಗವಹಿಸಿ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ವರ್ಧೆಯನ್ನು ಉದ್ಘಾಟಿಸಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಸಂಸ್ಕೃತಿ ಏಕತೆ ಒಗ್ಗಟ್ಟನ್ನು ಸೃಷ್ಟಿಸುವಲ್ಲಿ ಸಂಘ ಸಂಸ್ಥೆಗಳ ಕಾರ್ಯ ಶ್ಲಾಘನೀಯ.
ಏಕತೆ ಮತ್ತು ಒಗ್ಗಟ್ಟಿನಿಂದ ಎಲ್ಲರೂ ಒಂದುಗೂಡಿ ದೇಶದ ಪ್ರಗತಿಗೆ ಸಹಕರಿಸಬೇಕೆಂದು ಕ್ರೀಡಾಕೂಟಕ್ಕೆ ಶುಭ ಕೋರಿದರು.
ಕೊಡವ ನಮ್ಮೆಯ ಪ್ರಯುಕ್ತ ಕೊಡವ ಸಮಾಜಗಳ ನಡುವಿನ ಹಾಕಿ ಪಂದ್ಯಾಟದಲ್ಲಿ ವಿರಾಜಪೇಟೆ ಹಾಗೂ ಹುದಿಕೇರಿ ಕೊಡವ ಸಮಾಜಗಳ ನಡುವಿನ ಪಂದ್ಯಾಟಕ್ಕೆ ವಿರಾಜಪೇಟೆ ಕ್ಷೇತ್ರದ ಶಾಸಕರು ರಾಜ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಚಾಲನೆ ನೀಡಿ ಶುಭ ಕೋರಿದರು.
ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ, ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಕಾರ್ಯದರ್ಶಿ ವಾಟೆರೀರ ಪೂವಯ್ಯ ಮತ್ತು ಕೊಡವ ಸಮಾಜ ಒಕ್ಕೂಟದ ಮಾಜಿ ಅಧ್ಯಕ್ಷ ಮಲ್ಲೇಂಗಡ ದಾದ ಬೆಳ್ಯಪ್ಪ, ವಿರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಅಮ್ಮಣಿಚಂಡ ರವಿಉತ್ತಪ್ಪ, ಉಪಾಧ್ಯಕ್ಷ ಕಾಣತಂಡ ಜಗದೀಶ್, ಕೊಡಗು ಹಾಕಿ ಸಂಸ್ಥೆಯ ಅಧ್ಯಕ್ಷ ಪಳಂಗಂಡ ಲವಕುಮಾರ್, ಒಲಿಂಪಿಯನ್ ಚೆಪ್ಪುಡಿರ ಪೂಣಚ್ಚ, ಕ್ರೀಡಾ ಸಮಿತಿ ಅಧ್ಯಕ್ಷ ತಂಬುಕುತ್ತಿರ ಮಧು ಮಂದಣ್ಣ, ಕೊಡವ ಸಮಾಜ ಒಕ್ಕೂಟದ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕಿಕ್ಕೇರಿಯಂಡ ಲೀಲಾಅಯ್ಯಪ್ಪ ಮತ್ತಿತರರು ಉಪಸ್ಥಿತರಿದ್ದರು.
ಪುರುಷರ ಹಾಕಿ ಪಂದ್ಯಾಟದಲ್ಲಿ 8 ತಂಡ ಹಾಗೂ ಶುಕ್ರವಾರ ನಡೆಯಲಿರುವ ಮಹಿಳಾ ಹಾಕಿ ಪಂದ್ಯಾಟದಲ್ಲಿ 5 ತಂಡಗಳು ಭಾಗವಹಿಸಲಿವೆ.