ರಾಜ್ಯ ಕಾಂಗ್ರೆಸ್ ಸರ್ಕಾರ ಇತ್ತೀಚಿಗೆ ನಡೆಸಿದ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದೆ ಮಹಿಳಾ ನಾಯಕತ್ವ ಕಡೆಗಣಿಸಿದೆ ಎಂದು ಬಿಜೆಪಿಯ ಮೈಸೂರು ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಸವಿತಾ ಅರುಣ್ ಚವಾಣ್ ಟೀಕಿಸಿದ್ದಾರೆ.
ಇದೊಂದು ನಿರಾಶಾದಾಯಕ ಬೆಳವಣಿಗೆ. ಮಹಿಳಾ ಸಬಲೀಕರಣ, ಸಮಾನ ಅವಕಾಶ ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ನಿರಂತರವಾಗಿ ಮಾತನಾಡುವ ಕಾಂಗ್ರೆಸ್, ಅಧಿಕಾರ ಹಂಚಿಕೆಯ ವಿಚಾರದಲ್ಲಿ ಆ ಮಾತುಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ವಿಫಲವಾಗಿದೆ. ಕೇವಲ ಮತಕ್ಕಾಗಿ ಗೃಹಲಕ್ಷ್ಮೀ, ಗೃಹಜ್ಯೋತಿ ಯೋಜನೆಗಳನ್ನು ಜಾರಿಗೊಳಿಸಿ ಇದೀಗ ಯೋಜನೆಗಳಿಗೆ ಇಲ್ಲಸಲ್ಲದ ಷರತ್ತುಗಳನ್ನು ವಿಧಿಸುತ್ತಿದೆ. ಭಾಗ್ಯಲಕ್ಷ್ಮಿ ಯೋಜನೆಯನ್ನು ಸ್ಥಗಿಗೊಳಿಸುವ ಮೂಲಕ ಅನ್ಯಾಯ ಎಸಗಿದೆ. ಆಡಳಿತದಲ್ಲಿ ಮಹಿಳೆಯರನ್ನು ಕಡೆಗಣಿಸುವ ಮೂಲಕ ಮಹಿಳಾ ಸಮುದಾಯಕ್ಕೆ ಅಪಮಾನ ಮಾಡಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.