ಕೆ.ಆರ್.ನಗರದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಡಿ.ರವಿಶಂಕರ್ ಬಾಬಾ ಸಾಹೇಬರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ. ಪುಸ್ತಕ ಬಿಡುಗಡೆ ಮಾಡಿದರು. ತಹಸೀಲ್ದಾರ್ ಜಿ.ಸುರೇಂದ್ರಮೂರ್ತಿ, ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ಶಿವಪ್ರಕಾಶ್, ಆದಿಜಾಂಬವ ಸಂಘದ ಅಧ್ಯಕ್ಷ ಲೋಕೇಶ್, ಎಂಎಸ್‌ಎಸ್ ಅಧ್ಯಕ್ಷ ಎಂ.ಎಸ್.ರವಿಕುಮಾರ್, ಪುರಸಭಾ ಮಾಜಿ ಸದಸ್ಯ ಶಂಕರ್‌ಸ್ವಾಮಿ ಇನ್ನಿತರರು ಇದ್ದರು. 
ಮೈಸೂರು

ಸಂವಿಧಾನದಿಂದ ನೆಮ್ಮದಿಯ ಜೀವನ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಡಿ.ರವಿಶಂಕರ್ ಅಭಿಮತ
ಕೆ.ಆರ್.ನಗರ: ದೇಶದ ಎಲ್ಲ ಜಾತಿ, ಧರ್ಮ, ಭಾಷಿಕರುಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅನುಕೂಲವಾಗುವಂತಹ ಶ್ರೇಷ್ಠ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ನೀಡಿದ ಕಾರಣಕ್ಕಾಗಿ ನಾವೆಲ್ಲರೂ ಇಂದು ನೆಮ್ಮದಿಯ ಜೀವನ ನಡೆಸುತ್ತಿದ್ದೇವೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಪಟ್ಟಣದ ಮೈಸೂರು-ಹಾಸನ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಬಳಿ ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಮತ್ತು ತಾಲೂಕು ಆಡಳಿತ ವತಿಯಿಂದ ಮಂಗಳವಾರ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವಜನತೆ ಉತ್ತಮ ಶಿಕ್ಷಣ ಪಡೆದು ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು. ಆಗ ಅಂಬೇಡ್ಕರ್ ಅವರು ಕಂಡ ಕನಸು ನನಸಾಗಲಿದೆ. ಈ ವಿಚಾರವನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಿ ಶಿಕ್ಷಣಕ್ಕೆ ಮೊದಲ ಆದತ್ಯೆ ನೀಡಬೇಕೆಂದು ಸಲಹೆ ನೀಡಿದರು.
ಸಮುದಾಯದವರ ಬೇಡಿಕೆಯಂತೆ ಈಗಿರುವ ಅಂಬೇಡ್ಕರ್ ಪುತ್ಥಳಿಯನ್ನು ಬದಲಾವಣೆ ಮಾಡಿ ಇಲ್ಲಿರುವ ಅರಳಿಮರ ತೆರವು ಮಾಡಿ, ಈ ಸ್ಥಳವನ್ನು ಸುಂದರ ಉದ್ಯಾನವಾಗಿ ಮಾರ್ಪಾಡು ಮಾಡಲು ತೀರ್ಮಾನಿಸಿದ್ದು ಮುಂದಿನ 1 ವಾರದೊಳಗೆ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಮುಂದುವರಿದ ಕಾಮಗಾರಿಗೆ ಸರ್ಕಾರದ ವತಿಯಿಂದ 2 ಕೋಟಿ ರೂ. ಮಂಜೂರು ಆಗಿರುವ ಬಗ್ಗೆ ಸಮಾಜ ಕಲ್ಯಾಣ ಸಚಿವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಅವರು ಶಾಸಕರಿಗೆ ನೀಡಿದ ವಿಶೇಷ ಅನುದಾನ 50 ಕೋಟಿ ರೂ.ಗಳಲ್ಲಿ 1 ಕೋಟಿ ರೂ.ಗಳನ್ನು ಭವನಕ್ಕೆ ನೀಡಲಾಗಿದ್ದು ಒಟ್ಟು 3 ಕೋಟಿ ರೂ.ಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಸಾಲಿಗ್ರಾಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ನಾಗರಾಜು ಪ್ರಧಾನ ಭಾಷಣ ಮಾಡಿದರು. ತಹಸೀಲ್ದಾರ್ ಜಿ.ಸುರೇಂದ್ರಮೂರ್ತಿ, ಟಿಎಸ್‌ಡಬ್ಲುೃ ಶಂಕರ್‌ಮೂರ್ತಿ, ಜಿಪಂ ಮಾಜಿ ಸದಸ್ಯ ಸಿದ್ದಪ್ಪ, ತಾಪ ಮಾಜಿ ಅಧ್ಯಕ್ಷ ಎಂ.ಎಚ್.ಸ್ವಾಮಿ, ಆದಿಜಾಂಬವ ಸಂಘದ ಅಧ್ಯಕ್ಷ ಲೋಕೇಶ್, ಮುಖಂಡರಾದ ಹನಸೋಗೆ ನಾಗರಾಜು, ಹನಸೋಗೆಸಿದ್ದಯ್ಯ, ಎ.ಆರ್.ಕಾಂತರಾಜು, ಡಿ.ಕೆ.ಕೊಪ್ಪಲುರಾಜಯ್ಯ, ದಿವಾಕರ್, ಸುರೇಶ್ ಮಾತನಾಡಿದರು.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಡ್ಡಮಹೇಶ್, ಪುರಸಭಾ ಮಾಜಿ ಅಧ್ಯಕ್ಷ ಕೋಳಿಪ್ರಕಾಶ್, ಮಾಜಿ ಸದಸ್ಯ ಶಂಕರ್‌ಸ್ವಾಮಿ, ಕಾಂಗ್ರೆಸ್ ಪಕ್ಷದ ಎಸ್‌ಸಿ ಘಟಕದ ಅಧ್ಯಕ್ಷರಾದ ಡಿ.ವಿ.ಗುಡಿ ನಂದೀಶ್, ಕಂಠಿಕುಮಾರ್, ಎಂಎಸ್‌ಎಸ್ ಅಧ್ಯಕ್ಷ ಎಂ.ಎಸ್.ರವಿಕುಮಾರ್, ಕಾರ್ಯದರ್ಶಿ ಬಿ.ಎಚ್.ಕುಮಾರ್, ಖಜಾಂಚಿ ಎಚ್.ಎಂ.ಮಂಜು, ದಸಂಸ ತಾಲೂಕು ಅಧ್ಯಕ್ಷ ಎಂ.ಎಸ್.ಮಲ್ಲೇಶ್, ಮುಖಂಡರಾದ ಕಲ್ಲಹಳ್ಳಿ ಶ್ರೀನಿವಾಸ್, ಮಂಜುರಾಜು, ಉದ್ಯಮಿ ಎಸ್.ರವಿ, ತಿಮ್ಮಶೆಟ್ಟಿ, ಎಂ.ಜೆ.ಕುಮಾರ್, ಜಿ.ಎಂ.ಹೇಮಂತ್, ಡಾ.ಕೃಷ್ಣ, ತಾಪಂ ಇಒ ಕುಲದೀಪ್, ಪುರಸಭೆ ಮುಖ್ಯಾಧಿಕಾರಿ ಜಿ.ಎಸ್.ರಮೇಶ್, ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ಶಿವಪ್ರಕಾಶ್ ಇನ್ನಿತರರು ಹಾಜರಿದ್ದರು.