ಪಿರಿಯಾಪಟ್ಟಣ ತಾಲೂಕು ವಾಲ್ಮೀಕಿ ನಾಯಕ ನೌಕರರ ಸಂಘದ ವತಿಯಿಂದ ಪಟ್ಟಣದ ರೋಟರಿ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರಿಗೆ ಸನ್ಮಾನ ಮಾಡಲಾಯಿತು. ಜಗದೀಶ್, ಟಿ.ಎಸ್.ಚೆಲುವರಾಯಿ, ಪ್ರೊ.ನಂಜುಂಡಸ್ವಾಮಿ, ಪುಟ್ಟಣ್ಣ, ರಾಮಚಂದ್ರ, ಹರೀಶ್, ರವಿ ನಾಯಕ, ಎಚ್.ವಿ.ಶಿವಣ್ಣ ಇತರರಿದ್ದರು.
ಪಿರಿಯಾಪಟ್ಟಣ: ಶೋಷಿತ ವರ್ಗದವರು ಶಿಕ್ಷಣ ಮತ್ತು ಸಂಘಟನೆಯಿಂದ ಮಾತ್ರ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಪಟ್ಟಣದ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ನಂಜುಂಡಸ್ವಾಮಿ ಅಭಿಪ್ರಾಯಪಟ್ಟರು.
ಪಿರಿಯಾಪಟ್ಟಣ ತಾಲೂಕು ವಾಲ್ಮೀಕಿ ನಾಯಕ ನೌಕರರ ಸಂಘದ ವತಿಯಿಂದ ಪಟ್ಟಣದ ರೋಟರಿ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರಿಗೆ ಸನ್ಮಾನ ಮತ್ತು ಸಂಘದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ರಾಜಕೀಯ ಮತ್ತು ಸಾಮಾಜಿಕ ಶೈಕ್ಷಣಿಕ ಪ್ರಾತಿನಿಧ್ಯಕ್ಕಾಗಿ ಉತ್ತಮ ಶಿಕ್ಷಣವನ್ನು ಪಡೆಯಲು ಹೋರಾಡುವ ಅಗತ್ಯವಿದೆ ಎಂದು ತಿಳಿಸಿದರು.
ರಾಜ್ಯ ಪರಿಶಿಷ್ಟ ಪಂಗಡಗಳ ನೌಕರರ ಸಂಘದ ಅಧ್ಯಕ್ಷ ಜಗದೀಶ್ ಮಾತನಾಡಿ, ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಸಂಘಟಿತರಾಗಬೇಕು ಎಂದು ಸಲಹೆ ನೀಡಿದರು.
ತಾಲೂಕು ಘಟಕದ ಅಧ್ಯಕ್ಷ ಟಿ.ಎಸ್.ಚೆಲುವರಾಯಿ ಮಾತನಾಡಿ, ತಾಲೂಕು ವಾಲ್ಮೀಕಿ ನಾಯಕ ನೌಕರರ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ನಗದು ಬಹುಮಾನ ನೀಡುವ ಮೂಲಕ ಪ್ರೋತ್ಸಾಹ ನೀಡುವ ಉದ್ದೇಶವನ್ನು ಹೊಂದಿದ್ದು, ವಿದ್ಯಾರ್ಥಿಗಳು ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಪಡೆಯಬೇಕು, ಪಾಲಕರು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಬೇಕು ಎಂದು ತಿಳಿಸಿದರು.
ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಅತಿ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ತಾಲೂಕು ವಾಲ್ಮೀಕಿ ನಾಯಕ ಸಮಾಜದ ಮುಖಂಡರಾದ ಪುಟ್ಟಣ್ಣ, ರಾಮಚಂದ್ರ, ಹರೀಶ್, ರವಿ ನಾಯಕ, ಎಚ್.ವಿ.ಶಿವಣ್ಣ, ಎಚ್.ಎಸ್.ಕೃಷ್ಣಕುಮಾರ್, ಮಂಜಪ್ಪ, ಎಂ.ರುದ್ರಪ್ಪ, ನಟರಾಜನಾಯಕ, ರಾಜಕುಮಾರ್, ಎಸ್.ವೆಂಕಟೇಶ್, ಪಾಪಣ್ಣ ನಾಯಕ, ಗೋವಿಂದ ನಾಯಕ , ವಿ.ಮಹೇಶ್, ಎಂ.ಮಹಾದೇವ, ಎಂ.ಸಿ.ವೆಂಕಟೇಶ್, ಪದ್ಮಿನಿ, ಮಹಾದೇವ, ಲೋಕೇಶ್,ರೂಪಾ,ಭವಾನಿ, ಟಿ.ಕೆ.ಸಚಿನ್ ಇತರರು ಹಾಜರಿದ್ದರು.