ಪಿರಿಯಾಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮೈಸೂರು ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕ ಡಾ.ದಿಲೀಪ ಮಾತನಾಡಿದರು. ತಹಸೀಲ್ದಾರ್ ನಿಸರ್ಗ ಪ್ರಿಯ, ತಾ ಪಂ ಇಒ ಸುನೀಲ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್ ಇತರರು ಇದ್ದಾರೆ. 
ಮೈಸೂರು

ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಿ

ಎ. ಆರ್. ರಘುರಾಮ
ಪಿರಿಯಾಪಟ್ಟಣ: ತಾರತಮ್ಯ, ಅಸಮಾನತೆ, ಜಾತಿಯತೆಗಳಂಥ ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಿದರೆ ಮಾತ್ರ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಮೈಸೂರು ಪೇಂಟ್ಸ್ ಮತ್ತು ವಾರ್ನಿಷ್ ನಿಗಮದ ಅಧ್ಯಕ್ಷ ಎಚ್.ಡಿ.ಗಣೇಶ್ ಹೇಳಿದರು.
ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಲಿಖಿತ ಸಂವಿಧಾನ ಇರುವವರೆಗೂ ನಾವು ಸುರಕ್ಷಿತವಾಗಿ ಇರುತ್ತೇವೆ. ಅದಕ್ಕೆ ಪೂರಕವಾದ ಸಮಾಜದ ವ್ಯವಸ್ಥೆಯೂ ನಮ್ಮಲ್ಲಿ ಜಾರಿಗೆ ಬರಬೇಕು ಎಂದರು.
ಅಂಬೇಡ್ಕರ್ ಈ ದೇಶದಲ್ಲಿ ಜನಿಸಿಲ್ಲದಿದ್ದರೆ ಮತ್ತಷ್ಟು ಸಂಕಷ್ಟಕ್ಕೆ ಪ್ರತಿಯೊಬ್ಬರೂ ಒಳಗಾಗಬೇಕಾಗಿತ್ತು. ಎಲ್ಲರೂ ಇದನ್ನು ಅರ್ಥೈಸಿಕೊಳ್ಳಬೇಕು. ಇವರು ತೋರಿಸಿದ ಮಾರ್ಗದಲ್ಲಿ ಪ್ರತಿಯೊಬ್ಬರೂ ಸಾಗಬೇಕು. ಅವರ
ಆಶಯಗಳನ್ನು ಈಡೇರಿಸಲು ಯತ್ನಿಸಬೇಕು ಎಂದರು.
ಮೈಸೂರು ವಿವಿ ಸಮೂಹ ಸಂವಹನ ವಿಭಾಗದ ಉಪನ್ಯಾಸಕ ಡಾ.ದಿಲೀಪ ಮಾತನಾಡಿ,
ಬಾಲ್ಯದಿಂದಲೂ ಸಾಕಷ್ಟು ಅಪಮಾನ ಮತ್ತು ನೋವನ್ನು ಅನುಭವಿಸಿದ ಅಂಬೇಡ್ಕರ್ ಭಾರತದಲ್ಲಿನ ಶೋಷಿತ ಸಮುದಾಯಗಳ ವಿಮೋಚನೆಗೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಎಂದರು. ಸಾಮಾಜಿಕ ಅಸಮಾನತೆ ಹೋಗಲಾಡಿಸಲು ಬದುಕನ್ನೇ ಮುಡಿಪಾಗಿಟ್ಟಿದ್ದ ಅಂಬೇಡ್ಕರ್, ದೇಶ ಕಂಡ ಬಹುದೊಡ್ಡ ನಾಯಕ ಎಂದರು.
ಪ್ರತಿಯೊಬ್ಬರಿಗೂ ಸಮಾನತೆ, ಸ್ವಾತಂತ್ರ್ಯ ಮತ್ತು ಹಕ್ಕುಗಳನ್ನು ನೀಡಿ, ಅವುಗಳನ್ನು ರಕ್ಷಣೆ ಮಾಡಿಕೊಳ್ಳಲು
ಲಿಖಿತ ಸಂವಿಧಾನ ನಮ್ಮ ದೇಶದಲ್ಲಿದೆ. ಪ್ರತಿಯೊಬ್ಬ ಮಗುವಿಗೂ ಈ ದೇಶದಲ್ಲಿ ಉತ್ತಮ ಶಿಕ್ಷಣ ದೊರಕಬೇಕು. ಈ ಮೂಲಕ ಸಾಮಾಜಿಕ ಬದಲಾವಣೆ ಸಾಧ್ಯ ಎಂಬುದು ಅಂಬೇಡ್ಕರ್ ಅವರ ಪ್ರತಿಪಾದನೆಯಾಗಿತ್ತು ಎಂದರು.
ತಹಸೀಲ್ದಾರ್ ನಿಸರ್ಗ ಪ್ರಿಯ, ತಾ ಪಂ ಇಒ ಸುನೀಲ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಪ್ರಸನ್ನ, ತಾಪಂಮಾಜಿ ಸದಸ್ಯರಾದ ಟಿ.ಈರಯ್ಯ, ಎಸ್.ರಾಮು, ಮಾದರ ಮಹಾ ಸಭಾ ತಾಲೂಕು ಅಧ್ಯಕ್ಷ ಸೀಗೂರು ವಿಜಯ ಕುಮಾರ್, ನಾಯಕ ಸಮುದಾಯದ ಅಧ್ಯಕ್ಷ ರಾಮಚಂದ್ರ, ಪುರಸಭೆ ಸದಸ್ಯ ಸಿ.ತಮ್ಮಣ್ಣಯ್ಯ ಮಾತನಾಡಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕೃಷ್ಣೇಗೌಡ, ಡಾ. ಶ್ರೀನಿವಾಸ್, ಪಶುಸಂಗೋಪನೆ
ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಸಹಾಯಕ ಕೃಷಿ ನಿರ್ದೇಶಕಿ ಕುಸುಮಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಆರ್ ಎಫ್ ಒ ಪದ್ಮಶ್ರೀ, ಪುರಸಭೆ ಮುಖ್ಯಾಧಿಕಾರಿ ಎಚ್.ಪಿ.ಮಧು, ತೋಟಗಾರಿಕೆ ಇಲಾಖೆ ಅಧಿಕಾರಿ ಪ್ರಸಾದ್ ಇತರರು ಹಾಜರಿದ್ದರು.