ಬೆಟ್ಟದಪುರ ಸಮೀಪದ ಕೋಮಲಾಪುರದ ಅನುದಾನಿತ ಶ್ರೀರಾಮ ಪ್ರೌಢಶಾಲೆಯಲ್ಲಿ ಶಾಲೆಯ ಆಯೋಜಿಸಿದ್ದ 44ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಒಂದು ಗಿಡ ಅಮ್ಮನ ಹೆಸರಿನಲ್ಲಿ ಪರಿಸರ ಜಾಗೃತಿ ಅಭಿಯಾನವನ್ನು ಗಣ್ಯರು ಉದ್ಘಾಟಿಸಿದರು. ವಿವೇಕಾನಂದ, ಪ್ರೇಮ್‌ಕುಮಾರ್, ಎಂ.ಬಿ.ಮಲ್ಲಾರಾಧ್ಯ, ಆರಾಧ್ಯ, ಕಿಶೋರ್, ರಾಮಚಂದ್ರಶೆಟ್ಟಿ, ಸೋಮೇಗೌಡ ಇತರರಿದ್ದರು. 
ಮೈಸೂರು

ಗಿಡ ನೆಟ್ಟು ಪೋಷಿಸಿದರೆ ಆರೋಗ್ಯಕರ ಜೀವನ

ವಿಧಾನ ಪರಿಷತ್ ಸದಸ್ಯ ವಿವೇಕಾನಂದ ಅಭಿಮತ

ಬೆಟ್ಟದಪುರ: ಉತ್ತಮ ಪರಿಸರ ನಿರ್ಮಾಣವಾದಾಗ ಮಾತ್ರ ಸಮಾಜ ಆರೋಗ್ಯಯುತವಾಗಿ ಬದುಕಲು ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ವಿವೇಕಾನಂದ ಹೇಳಿದರು.
ಪಿರಿಯಾಪಟ್ಟಣ ತಾಲೂಕಿನ ಕೋಮಲಾಪುರದ ಅನುದಾನಿತ ಶ್ರೀರಾಮ ಪ್ರೌಢಶಾಲೆಯಲ್ಲಿ ಶಾಲೆಯ ಇತ್ತಿಚೆಗೆ ಆಯೋಜಿಸಿದ್ದ 44ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಒಂದು ಗಿಡ ಅಮ್ಮನ ಹೆಸರಿನಲ್ಲಿ ಪರಿಸರ ಜಾಗೃತಿ ಅಭಿಯಾನದ ಅಂಗವಾಗಿ ಗಿಡ ನೆಟ್ಟು ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಕಾಳಜಿ ಮತ್ತು ಜಾಗೃತಿ ಮೂಡಿದಾಗ ಉತ್ತಮ ಪರಿಸರ ನಿರ್ಮಾಣ ಸಾಧ್ಯವಾಗುತ್ತದೆ. ಪ್ರತಿಯೊಬ್ಬರೂ ತಮ್ಮ ಜಮೀನಿನ ಬದು, ಮನೆ ಹಾಗೂ ಖಾಲಿ ಜಾಗಗಳಲ್ಲಿ ಗಿಡ ನೆಟ್ಟು ಪೋಷಿಸಿದರೆ ಆರೋಗ್ಯಕರ ಜೀವನ ನಡೆಸಬಹುದು. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಗತ್ಯವಿರುವ ಮೂಲಸೌಕರ್ಯ ಒದಗಿಸಲು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಪ್ರೇಮ್‌ಕುಮಾರ್ ಮಾತನಾಡಿ, ಕಳೆದ 44 ವರ್ಷಗಳಿಂದ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸುತ್ತಿದ್ದಾರೆ. ಪಠ್ಯೇತರ ಚಟುವಟಿಕೆಯಲ್ಲೂ ವಿದ್ಯಾರ್ಥಿಗಳನ್ನು ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಭಾಗವಹಿಸಲು ಪ್ರೋತ್ಸಾಹಿಸಲಾಗುತ್ತಿದೆ ಎಂದರು.
ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಎಂ.ಬಿ.ಮಲ್ಲಾರಾಧ್ಯ ಮಾತನಾಡಿ, ಶಿಕ್ಷಣವು ವ್ಯಕ್ತಿಯ ಜೀವನ ರೂಪಿಸುವ ಪ್ರಮುಖ ಸಾಧನವಾಗಿದ್ದು, ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಬೋಧನೆ ಹಾಗೂ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕ ಆರಾಧ್ಯ ಕಿಶೋರ್, ಆಡಳಿತ ಮಂಡಳಿ ಸದಸ್ಯರಾದ ರಾಮಚಂದ್ರಶೆಟ್ಟಿ, ಸೋಮೇಗೌಡ, ಸುಂದ್ರೇಗೌಡ, ನಿವೃತ್ತ ಶಿಕ್ಷಕ ಟಿ.ರಾಜು, ಶಿಕ್ಷಕರಾದ ಕಾಂತರಾಜು, ಕೀರ್ತಿಪ್ರಸಾದ್, ನವೀನ್, ಆನಂದ್ ಕೃಷ್ಣ, ಅಂಕರಾಜು, ರಾಮಕೃಷ್ಣ, ಶ್ರೀನಿವಾಸ್ ಹಾಗೂ ವಿದ್ಯಾರ್ಥಿಗಳು, ಪಾಲಕರು ಉಪಸ್ಥಿತರಿದ್ದರು.