ಮರದೂರು ಶ್ರೀ ಆದಿಶಕ್ತಿ ತೋಪಿನಮ್ಮ ಹಾಗೂ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಹಾಯಧನದ ಚೆಕ್ ಅನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ ದೇವಸ್ಥಾನ ಸಮಿತಿಗೆ ಹಸ್ತಾಂತರ ಮಾಡಿದರು. ಸಂತೋಷ್ ಕುಮಾರ್, ಜವರೇಗೌಡ ಇತರರು ಇದ್ದರು.
- ಜಿಲ್ಲಾ ನಿರ್ದೇಶಕಿ ಲೀಲಾವತಿ ಅಭಿಮತ
ಬೆಟ್ಟದಪುರ: ಪಿರಿಯಾಪಟ್ಟಣ ಬೆಟ್ಟದಪುರ ಸಮೀಪದ ಮರದೂರು ಗ್ರಾಮದ ಶ್ರೀ ಆದಿಶಕ್ತಿ ತೋಪಿನಮ್ಮ ಹಾಗೂ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆವತಿಯಿಂದ .1,50,000 ರೂ ಸಹಾಯಧನ ಚೆಕ್ ಅನ್ನು ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ ಮಂಗಳವಾರ ದೇವಸ್ಥಾನ ಸಮಿತಿಗೆ ಹಸ್ತಾಂತರ ಮಾಡಿದರು.
ಬಳಿಕ ಮಾತನಾಡಿದ ಅವರು, ಗ್ರಾಮಾಂತರ ಭಾಗದಲ್ಲಿ ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಪೂಜ್ಯರು ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಮುಂದಿನ ಯುವ ಪೀಳಿಗೆಯು ಇಂತಹ ಕಾರ್ಯಕ್ರಮಗಳಿಂದ ಧಾರ್ಮಿಕ ಪರಂಪರೆಯನ್ನು ಉಳಿಸಿ ಬೆಳೆಸುವವರಾಗಿರಬೇಕು. ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವು ಶೀಘ್ರವಾಗಿ ಪೂರ್ಣಗೊಳ್ಳಲಿ ಎಂದರು.
ಯೋಜನಾಧಿಕಾರಿಗಳಾದ ಸಂತೋಷ್ ಕುಮಾರ್,
ದೇವಸ್ಥಾನದ ಸಮಿತಿ ಅಧ್ಯಕ್ಷ ಜವರೇಗೌಡ, ಕಾರ್ಯದರ್ಶಿ ದಂಡಯ್ಯ, ಪದಾಧಿಕಾರಿಗಳು ಇದ್ದರು.