ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆತ್ಮಿಯವಾಗಿ ಸ್ವಾಗತಿಸಲಾಯಿತು. 
ಮೈಸೂರು

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಆಯೋಜಿಸಿದ ಶ್ರೀ ಶಿವರಾತ್ರಿ ಶಿವಯೋಗಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ವಿಶೇಷ ವಿಮಾನ ಮೂಲಕ ದೆಹಲಿಯಿಂದ ಮೈಸೂರಿಗೆ ಮಂಗಳವಾರ ಆಗಮಿಸಿದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಹೂಗುಚ್ಛ ನೀಡಿ ರಾಷ್ಟ್ರಪತಿ ಅವರನ್ನು ಬರ ಮಾಡಿಕೊಂಡರು. ಈ ಸಂದರ್ಭ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಇದ್ದರು.