ನಗರದ ಸದ್ವಿದ್ಯಾ ಸಂಯುಕ್ತ ಪದವಿ ಪೂರ್ವ ಕಾಲೇಜಿನ ‘ಪ್ರತಿಭಾ ಶೋಧ-2026’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಪ್ರೊ. ಎಂ.ಎಸ್.ಕೆ.ನರಹರಿ ಬಾಬು, ಎಂ.ಡಿ. ಗೋಪಿನಾಥ್, ಸಿ.ಆರ್. ನಾಗರಾಜ್, ಕೆ.ಎನ್.ಫಣೀಶ್, ವಿ.ಆರ್. ರಮೇಶ್, ಜಿ.ಕೆ.ಇಂದುವತಿ, ಎಂ. ಶೈಲಜಾ ಇದ್ದರು.
- ಪ್ರೊ. ಎಂ.ಎಸ್.ಕೆ. ನರಹರಿ ಬಾಬು ಸಲಹೆ
ಶಿಕ್ಷಣದ ಜತೆಗೆ ಸಂಸ್ಕಾರ, ಸೃಜನಶೀಲತೆ ಹಾಗೂ ಜೀವನ ಮೌಲ್ಯಗಳ ಬೆಳವಣಿಗೆಗೂ ಆದ್ಯತೆ ನೀಡಬೇಕು ಎಂದು ಸದ್ವಿದ್ಯಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಎಸ್.ಕೆ. ನರಹರಿಬಾಬು ಹೇಳಿದರು.
ನಗರದ ಸದ್ವಿದ್ಯಾ ಸಂಯುಕ್ತ ಪದವಿಪೂರ್ವ ಕಾಲೇಜಿನ ‘ಪ್ರತಿಭಾ ಶೋಧ-2026’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಬುಧವಾರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಮೌಲ್ಯಯುತ ಜೀವನ ಮಾಡಬೇಕು ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಸದ್ವಿದ್ಯಾ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಎಂ.ಡಿ. ಗೋಪಿನಾಥ್ ಮಾತನಾಡಿ, ವಿದ್ಯಾರ್ಥಿಗಳು ಸಾಹಿತ್ಯ, ಸಂಗೀತ, ನೃತ್ಯ, ಭಾಷಣ ಹಾಗೂ ಚಿತ್ರಕಲೆ ಸೇರಿದಂತೆ ವಿವಿಧ ಪ್ರತಿಭೆಗಳನ್ನು ಅನಾವರಣಗೊಳಿಸಲು ಈ ಕಾರ್ಯಕ್ರಮ ವೇದಿಕೆಯಾಗಿದ್ದು, ಅವರ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.
ಸಂಸ್ಥೆಯ ಆಡಳಿತ ಮಂಡಳಿ ಹಿರಿಯ ಸದಸ್ಯ ಸಿ.ಆರ್. ನಾಗರಾಜ್, ಸಹ ಕಾರ್ಯದರ್ಶಿ ಕೆ.ಎನ್.ಫಣೀಶ್, ಪ್ರಾಂಶುಪಾಲ ವಿ.ಆರ್. ರಮೇಶ್, ಉಪಪ್ರಾಂಶುಪಾಲೆ ಜಿ.ಕೆ.ಇಂದುವತಿ, ಸಾಂಸ್ಕೃತಿಕ ಸಮಿತಿ ಸಂಚಾಲಕಿ ಎಂ. ಶೈಲಜಾ ಇತರರಿದ್ದರು.
ಇಂದು (ಜು. 17)ಕೊನೆಗೊಳ್ಳಲಿರುವ ಕಾರ್ಯಕ್ರಮದಲ್ಲಿ 20ಕ್ಕೂ ಹೆಚ್ಚು ಸಾಹಿತ್ಯ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದಾರೆ.