ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವುದನ್ನು ಖಂಡಿಸಿ ಎಐಡಿಎಸ್‌ಒ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ಚಂದ್ರಕಲಾ, ಸ್ವಾತಿ, ನಿತಿನ್, ಸೀಮಾ, ಪ್ರಕಾಶ್ ಇತರರು ಇದ್ದರು. 
ಮೈಸೂರು

ಸರ್ಕಾರಿ ಶಾಲೆಗಳ ವಿಲೀನ ಪ್ರಕ್ರಿಯೆ ಕೈಬಿಡುವಂತೆ ಆಗ್ರಹಿಸಿ ಪ್ರತಿಭಟನೆ

ಪ್ರಮುಖ ಮುಖ್ಯಾಂಶಗಳು

  • ಸರ್ಕಾರಿ ಶಾಲೆಗಳನ್ನು ಬಲಪಡಿಸುವುದನ್ನು ಬಿಟ್ಟು ಕೆಪಿಎಸ್ ವ್ಯಾಗ್ನೆಟ್, ಪಿಎಂಶ್ರೀ ಯೋಜನೆಗಳ ಮೂಲಕ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ನಾಶ ವಾಡಲು ಹೊರಟಿದೆ
  • ರಾಜ್ಯಾದ್ಯಂತ 317 ಶಾಲೆಗಳನ್ನು ವಿಲೀನಗೊಳಿಸಲು ಆದೇಶ ಹೊರಡಿಸಿದೆ. ಅಲ್ಲದೇ ಪಿಯು ಕಾಲೇಜುಗಳನ್ನು ಕೂಡ ವಿಲೀನಗೊಳಿಸಲಾಗುತ್ತಿದೆ
ಮೈಸೂರು:ಕೆಪಿಎಸ್ ವ್ಯಾಗ್ನೆಟ್ ಯೋಜನೆಯ ಹೆಸರಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನ ಪ್ರಕ್ರಿಯೆಯನ್ನು ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಆಗ್ರಹಿಸಿ ಎಐಡಿಎಸ್‌ಒ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ತೀವ್ರ ವಿರೋಧದ ನಡುವೆಂುೂ ಶಾಲೆಗಳ ವಿಲೀನ ಮುಂದುವರಿಸಿರುವುದು ರಾಜ್ಯ ಸರ್ಕಾರದ ಹಠವಾರಿ ಹಾಗೂ ಸರ್ವಾಧಿಕಾರಿ ಧೋರಣೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಐಡಿಎಸ್‌ಒ ಜಿಲ್ಲಾ ಉಪಾಧ್ಯಕ್ಷೆ ಸ್ವಾತಿ ವಾತನಾಡಿ, ಕೆಪಿಎಸ್ ವ್ಯಾಗ್ನೆಟ್ ಂೋಜನೆ ಹೆಸರಲ್ಲಿ ರಾಜ್ಯ ಸರ್ಕಾರ, ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುತ್ತಿದೆ. ಇದೀಗ ಪಿಎಂಶ್ರೀ ಶಾಲೆಗಳಿಗೆ ಕೂಡ ಸುತ್ತಲಿನ ಶಾಲೆಗಳನ್ನು ವಿಲೀನಗೊಳಿಸುವ ಪ್ರಕ್ರಿಂೆು ಆರಂಭಿಸಲಾಗಿದೆ ಎಂದು ಹೇಳಿದರು. ಸರ್ಕಾರ ಈಗ ಪಿಎಂಶ್ರೀ ಂೋಜನೆಂು ಹೆಸರಿನಲ್ಲಿ ರಾಜ್ಯಾದ್ಯಂತ 317 ಶಾಲೆಗಳನ್ನು ವಿಲೀನಗೊಳಿಸಲು ಆದೇಶ ಹೊರಡಿಸಿದೆ. ಅಲ್ಲದೇ ಪಿಂುು ಕಾಲೇಜುಗಳನ್ನು ಕೂಡ ವಿಲೀನಗೊಳಿಸಲಾಗುತ್ತಿದೆ ಎಂದು ಕಿಡಿಕಾರಿದರು.
ಗ್ಯಾರಂಟಿಗಳು ಮೋಸದಿಂದ ಕೂಡಿವೆ :
ಶಿಕ್ಷಣಕ್ಕೆ 8 ಗ್ಯಾರಂಟಿಗಳನ್ನು ನೀಡಿ ದೇಶದಲ್ಲೇಮಾದರಿ ಶಾಲಾ ವ್ಯವಸ್ಥೆ ನಿರ್ಮಿಸುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ವಾಸ್ತವದಲ್ಲಿ ಈ ಗ್ಯಾರಂಟಿಗಳು ಮೋಸದಿಂದ ಕೂಡಿವೆ. ಸರ್ಕಾರಿ ಶಾಲೆಗಳನ್ನು ಮುಚ್ಚುವ ಅಂಶವನ್ನು ನಯವಾಗಿ ತಳ್ಳಿ ಹಾಕುತ್ತಾ ಗ್ಯಾರಂಟಿಗಳ ಮುಖವಾಡದಲ್ಲಿ ನಾಡಿನ ಜನತೆಗೆ ರಾಜ್ಯ ಸರ್ಕಾರ ಮೋಸ ವಾಡುತ್ತಿದೆ ಎಂದು ಸ್ವಾತಿ ದೂರಿದರು.
ಸರ್ಕಾರಿ ಶಾಲೆಗಳನ್ನು ಬಲಪಡಿಸುವುದನ್ನು ಬಿಟ್ಟು ಕೆಪಿಎಸ್ ವ್ಯಾಗ್ನೆಟ್, ಪಿಎಂಶ್ರೀ ಯೋಜನೆಗಳ ಮೂಲಕ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ನಾಶ ವಾಡಲು ಹೊರಟಿದೆ. ಈ ನೀತಿಗಳನ್ನು ಬಲಿಷ್ಠ ಜನಾಂದೋಲನದ ಮೂಲಕ ಹಿಮ್ಮೆಟ್ಟಿಸಬೇಕು ಎಂದರು.
ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಂು ಸಲಹೆಗಾರ ಉಗ್ರ ನರಸಿಂಹೇಗೌಡ, ಉಪಾಧ್ಯಕ್ಷ ಹೆಜ್ಜಿಗೆ ಪ್ರಕಾಶ್, ಎಐಡಿಎಸ್‌ಒ ಜಿಲ್ಲಾಧ್ಯಕ್ಷೆ ಚಂದ್ರಕಲಾ, ಜಿಲ್ಲಾ ಕಾಂರ್ುದರ್ಶಿ ನಿತಿನ್, ಪದಾಧಿಕಾರಿಗಳಾದ ಚಂದನ, ಚಂದ್ರಿಕಾ, ದಿಶಾ, ಅಂಜಲಿ, ಸಮಿತಿ ಸದಸ್ಯರಾದ ಸಂಧ್ಯಾ, ಸೀವಾ, ಸುನಿಲ್, ಸುವಾ, ಬಸವರಾಜು, ಆಸಿಂಾ ಬೇಗಂ, ನೀತುಶ್ರೀ, ಪೂರ್ಣಿವಾ, ರಣಜಿತ್, ಪುಷ್ಪ, ಚಂದ್ರಶೇಖರ್ ಇತರರು ಇದ್ದರು.