ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ 
ಮೈಸೂರು

ನೀಟ್ ಅಕ್ರಮ ವಿರುದ್ಧ ಪ್ರತಿಭಟನೆ ಸದ್ದು

ಪ್ರಮುಖ ಮುಖ್ಯಾಂಶಗಳು

  • ನೀಟ್ ಅಕ್ರಮ ನಗರದಲ್ಲಿ ಮುಂದುವರಿದ ಪ್ರತಿಭಟನೆ
  • ಮೃತ 21 ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ನೀಡಲು ಪಟ್ಟು
ಮೈಸೂರು: ನೀಟ್ ಪರೀಕ್ಷೆಯ ಅಕ್ರಮದಿಂದ ಆತ್ಮಹತ್ಯೆ ಮಾಡಿಕೊಂಡು 21 ವಿದ್ಯಾರ್ಥಿಗಳ ಕುಟುಂಬಕ್ಕೆ ಕೇಂದ್ರ ಸರ್ಕಾರವು ಪರಿಹಾರ ನೀಡಬೇಕು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ರದ್ದು ಮಾಡಬೇಕು ಎಂದು ಆಗ್ರಹಿಸಿ ನಗರ ಹಾಗೂ ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ನಗರದ ರಾಮಸ್ವಾಮಿ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು
ನೀಟ್ ಅಕ್ರಮ ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಸರಿಯಲ್ಲ. ಅಕ್ರಮದಿಂದ ವಿದ್ಯಾರ್ಥಿ ಭವಿಷ್ಯಕ್ಕೆ ಹೊಡೆತ ಬಿದ್ದಿದೆ. ಪ್ರತಿಭಟನೆ ಹಕ್ಕು ಕಸಿದುಕೊಳ್ಳುವ ಹುನ್ನಾರವನ್ನು ಕೇಂದ್ರ ಸರ್ಕಾರ ನಡೆಸುತ್ತಿದೆ ಎಂದು ದೂರಿದರು.
ನೀಟ್ ಪರೀಕ್ಷೆಯ ಅಕ್ರಮ ತಡೆಯುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಲಫವಾಗಿದೆ. ಅಲ್ಲದೆ ಇದರ ಸರ್ವಾಧಿಕಾರಿ ಧೋರಣೆಗೆ  ಯುವಕರು ಪ್ರತಿಭಟನೆಯ ಮೂಲಕ ಸರಿಯಾದ ಉತ್ತರ ಕೊಟ್ಟಿದ್ದಾರೆ. ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು, ಯುವಕರ ಹೋರಾಟದ ಶಕ್ತಿ ಕೇಂದ್ರ ಸರ್ಕಾರಕ್ಕೆ ಗೊತ್ತಾಗಿದೆ. ಎಲ್ಲ ಪರೀಕ್ಷೆಯನ್ನು ಗಂಭೀರವಾಗಿ ನಡೆಸಬೇಕು. ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಚೆಲ್ಲಾಟವಾಡಬಾರದು ಎಂದು ಕಿಡಿಕಾರಿದರು. 
ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರ್‌ನಾಥ್, ಜಿಲ್ಲಾಧ್ಯಕ್ಷ ಡಾ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಯುವ ಕಾಂಗ್ರೆಸ್ ಸಮಿತಿ ನಗರಾಧ್ಯಕ್ಷ ಅಧ್ಯಕ್ಷ ಸೈಯದ್ ಅಬ್ರರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಚಂದನ್ ಕುಮಾರ್, ನಗರ ಉಪಾಧ್ಯಕ್ಷ ನವೀನ್ ಇನ್ನಿತರರಿದ್ದರು.