ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಚಾಮುಂಡಿಪುರಂನಲ್ಲಿರುವ ಬಾಲ ಬೋಧಿನಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಲಾಯಿತು. ರವಿಶಂಕರ್, ಡಾ. ಕೆ.ಬಿ.ಲಿಂಗರಾಜು, ವಿಶ್ವನಾಥ್, ಅಪೂರ್ವ ಸುರೇಶ್, ವಿಕ್ರಂ ಅಯ್ಯಂಗಾರ್, ಬಸವರಾಜ್ ಬಸಪ್ಪ, ಶ್ರೀಕಾಂತ್‌ಕಶ್ಯಪ್, ಲತಾ ಇತರರಿದ್ದರು.
- ಶಿಕ್ಷಣ ಪಡೆಯುವ ವಯಸ್ಸಿನಲ್ಲಿ ಮಕ್ಕಳನ್ನು ದುಡಿಸಿಕೊಳ್ಳುವುದು ಅಪರಾಧ
- ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲ ನಾಗರಿಕರ ಸಹಕಾರ ಬಹಳ ಮು
ಮೈಸೂರು: ಬಾಲಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗಾಗಿದೆ, ಅದು ನಿರ್ಮೂಲನೆಯಾದಾಗ ಮಾತ್ರ ದೇಶ ಅಭಿವೃದ್ಧಿ ಸಾಧ್ಯ ಎಂದು ಲಕ್ಷ್ಮೀಪುರಂ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರವಿಶಂಕರ್ ಹೇಳಿದರು.
ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಹಾಗೂ ಅಪೂರ್ವ ಸ್ನೇಹ ಬಳಗದಿಂದ ಚಾಮುಂಡಿಪುರಂನಲ್ಲಿರುವ ಬಾಲ ಬೋಧಿನಿ ಶಾಲೆಯಲ್ಲಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲ ನಾಗರಿಕರ ಸಹಕಾರ ಬಹಳ ಮುಖ್ಯ. ಶಿಕ್ಷಣ ಪಡೆಯುವ ವಯಸ್ಸಿನಲ್ಲಿ ಮಕ್ಕಳನ್ನು ಕಟ್ಟಡಗಳ ಕೆಲಸ, ಅಂಗಡಿ, ಗ್ಯಾರೇಜ್, ಹೋಟೆಲ್, ಕಾರ್ಖಾನೆ, ಬೇಕರಿ ಸೇರಿದಂತೆ ಮತ್ತಿತರ ಸ್ಥಳಗಳಲ್ಲಿ ಕೆಲಸ ಮಾಡಿಸುವುದು ಅಪರಾಧವಾಗಿದೆ ಎಂದು ತಿಳಿಸಿದರು.
ಇಂತಹ ಪ್ರಕರಣಗಳನ್ನು ಕಂಡರೆ ತಕ್ಷಣವೇ ಸಕ್ಷಮ ಇಲಾಖೆಯ ಅಧಿಕಾರಿಗಳಿಗೆ ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಸಾರ್ವಜನಿಕರು ಸಾಮಾಜಿಕ ಹೊಣೆಗಾರಿಕೆಯನ್ನು ನಿರ್ವಹಿಸಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಮಕ್ಕಳಿಗೆ ನೋಟ್ ಪುಸ್ತಕ, ಲೇಖನಿ ವಿತರಿಸಲಾಯಿತು. ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಡಾ. ಕೆ.ಬಿ.ಲಿಂಗರಾಜು, ಕರ್ನಾಟಕ ಬ್ಯಾಂಕ್‌ನ ನಿವೃತ್ತ ಸಹಾಯಕ ಪ್ರಧಾನ ವ್ಯವಸ್ಥಾಪಕ ವಿಶ್ವನಾಥ್, ಅಪೂರ್ವ ಸುರೇಶ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಉಪಾಧ್ಯಕ್ಷ ವಿಕ್ರಂ ಅಯ್ಯಂಗಾರ್, ಕೆ. ಆರ್.ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ, ಅರಿವು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ಕಶ್ಯಪ್, ಶಾಲೆಯ ಮುಖ್ಯ ಶಿಕ್ಷಕ್ಷಿ ಲತಾ, ಮುಖಂಡರಾದ ದೂರ ರಾಜಣ್ಣ, ಎಸ್.ಎನ್. ರಾಜೇಶ್, ಶಿಕ್ಷಕರಾದ ಲತಾ ಕುಮಾರಿ, ಮೊಸಿನ್‌ತಾಜ್, ಲೀಲಾವತಿ, ಮಮತಾ ಇತರರಿದ್ದರು.