ಚಪ್ಪರದಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ಸ್ವಾಮಿ ಮಗುವಿಗೆ ಲಸಿಕೆ ಹಾಕುವ ಮೂಲಕ ರಾಷ್ಟೀಯ ಪಲ್ಸ್ ಪೋಲಿಯೋಗೆ ಚಾಲನೆ ನೀಡಿದರು. ಡಾ.ಸಂದೀಪ್, ಚೈತ್ರಾ, ರತ್ನಾ, ಆಶಾ, ಜಲಜಾಕ್ಷಿ, ಗೀತಾ ಇದ್ದರು. 
ಮೈಸೂರು

ಚಪ್ಪರದಹಳ್ಳಿಯಲ್ಲಿ ಪಲ್ಸ್ ಪೋಲಿಯೋ

ಬೆಟ್ಟದಪುರ: ಸಮೀಪದ ಚಪ್ಪರದಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ಸ್ವಾಮಿ ಮಗುವಿಗೆ ಲಸಿಕೆ ಹಾಕುವ ಮೂಲಕ ರಾಷ್ಟ್ರೀಯ ಪಲ್ಸ್ ಪೋಲಿಯೋಗೆ ಚಾಲನೆ ನೀಡಿದರು.
ಕೇಂದ್ರದ ವೈದ್ಯಾಧಿಕಾರಿ ಡಾ.ಆರ್.ಸಂದೀಪ್ ಮಾತನಾಡಿ, ಪಲ್ಸ್ ಪೋಲಿಯೋ ಎಂಬ ರಾಷ್ಟ್ರೀಯ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಪರಿಣಾಮಕಾರಿಯಾಗಿ ಪೋಲಿಯೋ ರೋಗವನ್ನು ತಡೆಗಟ್ಟಲು ಭಾರತ ಸರ್ಕಾರ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ. ವಿಶ್ವಸಂಸ್ಥೆಯು ಈಗಾಗಲೇ ಭಾರತವನ್ನು ಪೋಲಿಯೋ ಮುಕ್ತ ದೇಶ ಘೋಷಣೆ ಮಾಡಿದೆ. ಆದರೂ ಅಕ್ಕಪಕ್ಕದ ದೇಶದ ಹಲವು ಭಾಗಗಳಲ್ಲಿ ಪೋಲಿಯೋ ರೋಗ ದಾಖಲಾಗಿರುವ ಹಿನ್ನೆಲೆಯಲ್ಲಿ ಲಸಿಕೆ ಹಾಕಲಾಗುತ್ತಿದೆ ಎಂದರು.
ಬೆಟ್ಟದಪುರ ಸಮೀಪದ ಕಣಗಾಲು, ಶ್ಯಾನುಭೋಗನಹಳ್ಳಿ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಗೊರಹಳ್ಳಿ, ಹೊನ್ನಾಪುರ, ಅಂಬಲಾರೆ ಉಪಕೇಂದ್ರಗಳಲ್ಲಿ ಮಕ್ಕಳಿಗೆ ಲಸಿಕೆ ಹಾಕಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ಚೈತ್ರಾ, ಅಂಗನವಾಡಿ ಕಾರ್ಯಕರ್ತೆರಾದ ಎ.ಜೆ.ರತ್ನಾ, ಆಶಾ ಸಿ.ಕೆ, ಜಲಜಾಕ್ಷಿ, ಸಿಬ್ಬಂದಿ ಗೀತಾ ಸೇರಿದಂತೆ ಇತರರು ಇದ್ದರು.