ಸಿದ್ದರಾಮಯ್ಯ ಮತ್ತು ಡಿಕೆಶಿ 
ಮೈಸೂರು

ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು

ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಅದು ಒಪ್ಪಬೇಕಾದ ವಿಚಾರ. ಯಾರು ಪಕ್ಷಕ್ಕಿಂತ ದೊಡ್ಡವರಾದರೂ ಸಾಧ್ಯವೇ ಇಲ್ಲ ಎಂದರು. ನಾಯಕತ್ವ ಬದಲಾವಣೆ ರಾಹುಲ್ ಗಾಂಧಿ ತೀರ್ಮಾನಿಸಬೇಕು. ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ ಅವರ ತೀರ್ಮಾನಕ್ಕೆ ನಾವು ಬದ್ಧ ಎಂದು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.
ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ. ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲು ಪುನಹ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.
ಮಾಜಿ ಸಚಿವ ಕೆ. ಎನ್ ರಾಜಣ್ಣ ನಿನ್ನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಭೇಟಿ ಮಾಡಲಿ, ಡಿ.ಕೆ.ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾಗಿದ್ದು ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ನಾನೇ ಎಂದು ಉಪಮುಖ್ಯಮಂತ್ರಿಗಳು ಹೇಳಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಆದರ ಪ್ರಶ್ನೆಯೇ ಇಲ್ಲ. ಎಸ್.ಎಂ ಕೃಷ್ಣಾ ಅವರು ಆಗ ಮುಖ್ಯಮಂತ್ರಿಗಳಿದ್ದರು, ಸರ್ಕಾರ ಮಾಡಿತ್ತು ಎಂದರು.