ಸರಗೂರು ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ನಿರ್ದೇಶಕರು ಗೌರವಿಸಿದರು. ರಾಜೇಶ್, ಪಾಟೀಲ್, ಗೋಪಾಲಕೃಷ್ಣ, ಮಹೇಶ್, ಶ್ರೀಕಾಂತ್ ನಿಂಗಪ್ಪ, ಲೋಕೇಶ್ ಇತರರು ಇದ್ದರು.
ಸರಗೂರು: ತಾಲೂಕಿನ ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಅಧ್ಯಕ್ಷರಾಗಿ ರಾಜೇಶ್ ಹಾಗೂ ಉಪಾಧ್ಯಕ್ಷರಾಗಿ ಪಾಟೀಲ್ ಆಯ್ಕೆಯಾದರು.
ಸಂಘದ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಗೌರವಾಧ್ಯಕ್ಷರಾಗಿ ಗೋಪಾಲಕೃಷ್ಣ, ಕಾರ್ಯದರ್ಶಿಯಾಗಿ ಮಹೇಶ್, ಖಜಾಂಚಿಯಾಗಿ ಶ್ರೀಕಾಂತ್ ನಿಂಗಪ್ಪ, ನಿರ್ದೇಶಕರಾಗಿ ಲೋಕೇಶ್, ಕುಮಾರ್, ಮಿಥುನ್, ಪ್ರಕಾಶ್, ನಾಗೇಶ್ ಹಾಗೂ ರವಿನಂದನ ಆಯ್ಕೆಯಾದರು.
ನೂತನ ಅಧ್ಯಕ್ಷ ರಾಜೇಶ್ ಮಾತನಾಡಿ, ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸುವುದು ಪ್ರಮುಖ ಆದ್ಯತೆಯಾಗಿದೆ. ವಾಹನ ಚಾಲಕರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಸಂಘದ ಎಕ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಲಾಗುವುದು ಎಂದು ಹೇಳಿದರು.
ಚಾಲಕರಿಗೆ ಎದುರಾಗುವ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಸಂಘದ ಅಭಿವೃದ್ಧಿಗೆ ಸದಸ್ಯರ ಸಹಕಾರ ಅಗತ್ಯ. ಎಲ್ಲರೂ ಒಗ್ಗಟ್ಟಿನಿಂದ ಸಂಘವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ಸಂಘದ ನೂತನ ಅಧ್ಯಕ್ಷ-ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.