ಹುಣಸೂರು ತಾಲೂಕು ಸರ್ಕಾರಿ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳನ್ನು ಬಿಇಒ ಕಾಳನಾಯಕ ಸನ್ಮಾನಿಸಿದರು. ಬಿಆರ್‌ಸಿ ಹೇಮಲತಾ, ಎಚ್.ಕೆ.ರಮೇಶ್, ಶಿವಣ್ಣ, ಮಮತಾ, ಡಿ.ಎಂ.ರವಿ ಇತರರು ಇದ್ದರು.  
ಮೈಸೂರು

ದೈಹಿಕ ಶಿಕ್ಷಣ ಶಿಕ್ಷಕರ ಸಂಘಕ್ಕೆ ರಮೇಶ್ ಅಧ್ಯಕ್ಷ

ಪ್ರಮುಖ ಮುಖ್ಯಾಂಶಗಳು

  • Physical Education Teachers Association
ಹುಣಸೂರು: ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ದೊಡ್ಡಹೆಜ್ಜೂರು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಎಚ್.ಕೆ.ರಮೇಶ್ ಅವಿರೋಧವಾಗಿ ಆಯ್ಕೆಯಾದರು.
ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ರಾಜ್ಯ ಸರ್ಕಾರಿ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಘಟಕದ ಸರ್ವಸದಸ್ಯರ ಸಭೆಯಲ್ಲಿ ಎಚ್.ಕೆ.ರಮೇಶ್ ಅಧ್ಯಕ್ಷರಾಗಿ ಆಯ್ಕೆಯಾದರೆ, ಪ್ರಧಾನ ಕಾರ್ಯದರ್ಶಿಯಾಗಿ ಕೊತ್ತೇಗಾಲ ಪ್ರೌಢಶಾಲೆಯ ಶಿವಣ್ಣ, ಖಜಾಂಚಿಯಾಗಿ ಅರಸು ಕಲ್ಲಳ್ಳಿ ಪ್ರೌಢಶಾಲೆಯ ಮಮತಾ ಹಾಗೂ ಜಂಟಿ ಕಾರ್ಯದರ್ಶಿಯಾಗಿ ಮುಳ್ಳೂರು ಪ್ರೌಢಶಾಲೆಯ ಎಸ್.ರಮೇಶ್ ಅವಿರೋಧವಾಗಿ ಆಯ್ಕೆಯಾದರು.
ಆಯ್ಕೆಯಾದ ಪದಾಧಿಕಾರಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕಾಳನಾಯಕ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಹೇಮಲತಾ ಹಾಗೂ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಡಿ.ಎಂ.ರವಿ ಹಾಗೂ ತಾಲೂಕು ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ಕೆ. ಜಗದೀಶ್ ಅಭಿನಂದಿಸಿದರು. ನೂತನ ಅಧ್ಯಕ್ಷ ಎಚ್.ಕೆ.ರಮೇಶ್ ಮಾತನಾಡಿ, ಅಧಿಕಾರದ ಅವಧಿಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು.