ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ  
ಮೈಸೂರು

ಸಿಲುಕಿದ್ದ ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ರಕ್ಷಣೆ

ಪ್ರಮುಖ ಮುಖ್ಯಾಂಶಗಳು

  • ಸಿಎಆರ್ ಮೈದಾನದ ಪ್ರವೇಶ ದ್ವಾರದಲ್ಲಿ ಅಳವಡಿಸಿದ್ದ ಕಬ್ಬಿಣ ಬ್ಯಾರಿಕೇಡ್‌ನಡಿ ಸಿಲುಕಿದ ಮಹಿಳಾ ಪೊಲೀಸರು
  • ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ
ಮೈಸೂರು: ಚಾಮುಂಡಿಬೆಟ್ಟದ ತಪ್ಪಲಿನ ಸಿಎಆರ್ ಮೈದಾನದ ಪ್ರವೇಶ ದ್ವಾರದಲ್ಲಿ ಅಳವಡಿಸಿದ್ದ ಕಬ್ಬಿಣ ಬ್ಯಾರಿಕೇಡ್‌ನಡಿ ಸಿಲುಕಿದ್ದ ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ಅನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.
ಲಕ್ಷ್ಮೀಪುರಂ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ನಳಿನಿ ಶುಕ್ರವಾರ ಪರೇಡ್‌ಗಾಗಿ ಇಲ್ಲಿಗೆ ಆಗಮಿಸಿದ್ದರು.
ಬಳಿಕ ವಾಪಸ್ ಮನೆಗೆ ತೆರಳಲು ಹೊರಗೆ ಬರುತ್ತಿದ್ದಾಗ ಕಬ್ಬಿಣದ ಪೈಪ್‌ಗಳ ನಡುವೆ ಆಕಸ್ಮಿಕವಾಗಿ ಜಾರಿ ಬಿದ್ದಿದ್ದು, ಕಾಲು ಪೈಪ್‌ನಡಿ ಸಿಲುಕಿಕೊಂಡಿದೆ.
ತಕ್ಷಣ ಸ್ಥಳದಲ್ಲಿದ್ದ ಪೊಲೀಸರು ಬನ್ನಿಮಂಟಪ ಅಗ್ನಿ ಶಾಮಕ ದಳ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ, ಕಬ್ಬಿಣದ ಪೈಪ್ ಕತ್ತರಿಸಿ ತೆರವುಗೊಳಿಸಿದ್ದಾರೆ.