ಕೊಪ್ಪ ಗ್ರಾಮದಲ್ಲಿ ಮಾಜಿ ಶಾಸಕ ಕೆ ಮಾದೇವ್ ಅವರ ಜನ್ಮದಿನವನ್ನು ಆಚರಿಸಲಾಯಿತಿ. ಸಿ.ಎಸ್ ರೇಣುಕಸ್ವಾಮಿ, ಎ.ಎಸ್.ಸೋಮಶೇಖರ್, ಹೇಮಂತ್ ಕುಮಾರ್, ಶಫಿ ಉಲ್ಲಾಖಾನ್, ಶಾಹಿದ್ ಇದ್ದರು. 
ಮೈಸೂರು

ಜನರ ಸಂಕಷ್ಟಕ್ಕೆ ಸ್ಪಂದಿಸುವುದು ಆದ್ಯತೆ

ಕಿರಣ್ ಗೌಡ.ಜಿ

ಪ್ರಮುಖ ಮುಖ್ಯಾಂಶಗಳು

  • ಮಾಜಿ ಶಾಸಕ ಕೆ.ಮಹದೇವ್ ಹೇಳಿಕೆ
  • ಹುಟ್ಟುಹಬ್ಬ ಆಚರಣೆ
ಬೈಲುಕುಪ್ಪೆ: ಮಾಜಿ ಶಾಸಕ ಕೆ.ಮಹದೇವ್ ಅವರ ಜನ್ಮದಿನವನ್ನು ಅಭಿಮಾನಿಗಳು ಸಂಭ್ರಮದಿಂದ ಮಂಗಳವಾರ ಆಚರಿಸಿದರು.
ಪಿರಿಯಾಪಟ್ಟಣ ತಾಲೂಕಿನ ಕೊಪ್ಪದ ಖಾಸಗಿ ಹೋಟೆಲ್‌ನಲ್ಲಿ ಜೆಡಿಎಸ್ ಯುವನಾಯಕರು ಹಾಗೂ ಅಭಿಮಾನಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆ.ಮಹದೇವ್ ಅವರಿಗೆ ಹೂಗುಚ್ಛ ನೀಡಿ ಸನ್ಮಾನಿಸಿ ಮುಂದಿನ ರಾಜಕೀಯ ಭವಿಷ್ಯ ಉಜ್ಜಲವಾಗಲಿ ಎಂದು ಶುಭಹಾರೈಸಿದರು.
ಮಾಜಿ ಶಾಸಕ ಕೆ.ಮಹದೇವ್ ಮಾತನಾಡಿ,ಅಧಿಕಾರ ಇರಲಿ ಇಲ್ಲದಿರಲಿ ಜನರ ಸಂಕಷ್ಟಕ್ಕೆ ಸ್ಪಂದಿಸುವುದೆ ನನ್ನ ಮೊದಲ ಆದ್ಯತೆ. ಮುಂದಿನ ದಿನಗಳಲ್ಲಿ ತಾಲೂಕಿನ ಅಭಿವೃದ್ಧಿ ಮತ್ತು ಜನರ ಸೇವೆಗಾಗಿ ಶ್ರಮಿಸುತ್ತೇನೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ ಮತ್ತು ನಿಖಿಲ್ ಕುಮಾರಸ್ವಾಮಿ ಅವರ ಕೈ ಬಲಪಡಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದರು.
ಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಎಸ್.ರೇಣುಕಾಸ್ವಾಮಿ, ಕೊಪ್ಪ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎ.ಎಸ್.ಸೋಮಶೇಖರ್, ಜೆಡಿಎಸ್ ಮುಖಂಡ ಮಂಜು, ಹೇಮಂತ್ ಕುಮಾರ್, ಚಂದ್ರು, ಶಫಿವುಲ್ಲಾ ಖಾನ್, ಶಾಹಿಲ್, ಶಬೀರ್, ಪುಟ್ಟಿ , ಪರ್ವೀಜ್, ಚಂದು ಇತರರು ಇದ್ದರು.