divider 
ಮೈಸೂರು

‘ಡಿವೈಡರ್‌ಗೆ ಗುದ್ದಿದ ಸ್ಕೂಟರ್’ ಸವಾರ ಸಾವು

ಅವಿನಾಶ್ ಜೈನಹಳ್ಳಿ
ಬೋಗಾದಿ-ಗದ್ದಿಗೆ ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆಯ ಡಿವೈಡರ್‌ಗೆ ಗುದ್ದಿದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ತಾಲೂಕಿನ ಗೋಹಳ್ಳಿ ನಿವಾಸಿ ಎಂ.ಎಸ್.ಪವನ್(25) ಮೃತರು. ಭಾನುವಾರ ಕೆಲಸದ ನಿಮಿತ್ತ ಮೈಸೂರಿಗೆ ಬಂದಿದ್ದ ಪವನ್ ರಾತ್ರಿ 11 ಗಂಟೆಯಲ್ಲಿ ಅವರು ಗೋಹಳ್ಳಿಗೆ ತೆರಳುವ ಸಲುವಾಗಿ ಬೋಗಾದಿ-ಗದ್ದಿಗೆ ರಸ್ತೆಯಲ್ಲಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಅವರ ವಾಹನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.