ಬೆಟ್ಟದಪುರದ ಶ್ರೀ ಸಿಡಿಲು ಮಲ್ಲಿಕಾರ್ಜುನಸ್ವಾಮಿ ತೆಪ್ಪೋತ್ಸವ ಭಕ್ತರ ಸಮ್ಮುಖದಲ್ಲಿ ನೆರವೇರಿತು.  
ಮೈಸೂರು

ಸಿಡಿಲು ಮಲ್ಲಿಕಾರ್ಜುನಸ್ವಾಮಿ ತೆಪ್ಪೋತ್ಸವ

ಎಂ.ರವಿ
ಬೆಟ್ಟದಪುರ: ಇಲ್ಲಿನ ಇತಿಹಾಸ ಪ್ರಸಿದ್ಧ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ತೆಪ್ಪೋತ್ಸವ ಪೂಜೆ ಗುರುವಾರ ರಾತ್ರಿ ಭಕ್ತರ ಸಮ್ಮುಖದಲ್ಲಿ ಸಡಗರದಿಂದ ನೆರವೇರಿತು.
ಗ್ರಾಮದ ಮಧ್ಯಭಾಗದಲ್ಲಿರುವ ಶ್ರೀ ಸಿಡಿಲು ಮಲ್ಲಿಕಾರ್ಜುನಸ್ವಾಮಿ ದೇವಾಲಯದಲ್ಲಿ ಭ್ರಮರಾಂಭ ಸಮೇತ ಶ್ರೀ ಸಿಡಿಲು ಮಲ್ಲಿಕಾರ್ಜುನ ಹಾಗೂ ಬೆಳ್ಳಿ ಬಸಪ್ಪ ಉತ್ಸವ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಉತ್ಸವ ಮೂರ್ತಿಗಳನ್ನು ಪ್ರಮುಖ ಬೀದಿಗಳಲ್ಲಿ ವಾದ್ಯದೊಂದಿಗೆ ಮೆರವಣಿಗೆ ಮಾಡಿ ಸಮೀಪದ ತಾವರೆಕೆರೆಯಲ್ಲಿ ಅಲಂಕಾರಗೊಂಡ ತೆಪ್ಪದಲ್ಲಿ ಕೂರಿಸಿ ತೆಪ್ಪೋತ್ಸವ ನಡೆಸಲಾಯಿತು. ಈ ವೇಳೆ ಆಗಮಿಸಿದ ಭಕ್ತರು ಇಷ್ಟಾರ್ಥ ಸಿದ್ಧಿಗಾಗಿ ಬೇಡಿಕೊಂಡರು.