ಡಾ.ಯತೀಂದ್ರ ಸಿದ್ದರಾಮಯ್ಯ  
ಮೈಸೂರು

‘ಎಸ್‌ಐಆರ್’ ಸರ್ಕಾರದ ವಿರುದ್ಧ ಅನಗತ್ಯ ಟೀಕೆ: ಡಾ.ಯತೀಂದ್ರ ಕಿಡಿ

ಪ್ರಮುಖ ಮುಖ್ಯಾಂಶಗಳು

  • ಸುಖಾ ಸುಮ್ಮನೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್‌ನ ನಾಯಕರು ಟೀಕೆ
  • ರಾಜಕಾರಣಕ್ಕಾಗಿ ರಾಜ್ಯ ಸರ್ಕಾರ ವಿರುದ್ಧ ಆರೋಪ
  • ಕಾಂಗ್ರೆಸ್ ಪಕ್ಷದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ.
ಮೈಸೂರು: ಎಸ್‌ಐಆರ್ ಕುರಿತು ಸುಖಾ ಸುಮ್ಮನೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್‌ನ ನಾಯಕರು ಟೀಕೆ ಮಾಡುತ್ತಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಎಸ್‌ಐಆರ್ ಪ್ರಕ್ರಿಯೆ ದುರ್ಬಳಕೆ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆ ಮಾಡುತ್ತಿರುವುದು ಕೇಂದ್ರ ಸರ್ಕಾರ.
 ಅದರ ಪ್ರತಿಯೊಂದು ಪ್ರಕ್ರಿಯೆಯನ್ನು ಮೇಲುಸ್ತುವಾರಿ ಮಾಡುತ್ತಿದ್ದು, ಇದು ಗೊತ್ತಿದ್ದರೂ ರಾಜಕಾರಣಕ್ಕಾಗಿ ರಾಜ್ಯ ಸರ್ಕಾರ ವಿರುದ್ಧ ಆರೋಪ ಮಾಡಲಾಗುತ್ತಿದೆ. ರಾಜಕೀಯ ಪ್ರೇರಿತ ದೂರುಗಳಿಗೆ ರಾಜ್ಯ ಚುನಾವಣಾ ಆಯೋಗ ಬೆಲೆ ಕೊಡಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಗರಾಭಿವೃದ್ಧಿ ಸಚಿವ ಸ್ಥಾನದಿಂದ ಕೈ ಬಿಡಬೇಕೆಂಬ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದು, ಲೋಕಾಯುಕ್ತ ಸಂಸ್ಥೆಯಿಂದ ಮುಡಾ ಪ್ರಕರಣದ ತನಿಖೆ ಪೂರ್ಣಗೊಂಡಿದೆ. ತನಿಖಾ ವರದಿಯನ್ನೂ ಸಲ್ಲಿಸಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯವೂ ಇದನ್ನು ಒಪ್ಪಿದೆ. ಆದರೂ ಮೇಲ್ಮನವಿ ಹೋಗಿದ್ದಾರೆ. ತನಿಖೆ ಪೂರ್ಣಗೊಂಡಿರುವುದರಿಂದ ನಾವು ಪ್ರಭಾವ ಬೀರಲು ಸಾಧ್ಯವಿಲ್ಲ. ಹೀಗಾಗಿ, ಪ್ರತಿಪಕ್ಷಗಳ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಬ್ಯಾನರ್, ಪೋಸ್ಟರ್ ಹಾಕಿಲ್ಲ ಎಂಬ ವಿಚಾರಕ್ಕೆ ನಮ್ಮ ತಂದೆ ತಲೆ ಕೆಡಿಸಿಕೊಳ್ಳಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.