ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಕಡಕೋಳ ಗ್ರಾಮದ ಕಾಳೀಬೀರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಗೆಜ್ಜಗಳ್ಳಿ ಮಹೇಶ್, ಮಧುಕುಮಾರ್, ಈರಪ್ಪ, ಶಿವಕುಮಾರ್, ನಾಗೇಶ್ ಇದ್ದರು. 
ಮೈಸೂರು

ಕಡಕೋಳ ಕಾಳೀಬೀರಮ್ಮ ದೇಗುಲದಲ್ಲಿ ವಿಶೇಷ ಪೂಜೆ

ಪ್ರಮುಖ ಮುಖ್ಯಾಂಶಗಳು

  • ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಹಿನ್ನೆಲೆ
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಚಾಮುಂಡೇಶ್ವರಿ ಕ್ಷೇತ್ರ ಗ್ರಾಮಾಂತರ ಮಂಡಲದ ಕಡಕೋಳ ಮಹಾಶಕ್ತಿ ಕೇಂದ್ರದ ವತಿಯಿಂದ ಶುಕ್ರವಾರ ಕಡಕೋಳ ಗ್ರಾಮದ ಕಾಳೀಬೀರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಈಡುಗಾಯಿ ಒಡೆದು ಹಾಗೂ 25 ದೀಪಗಳನ್ನು ಬೆಳಗಿಸಲಾಯಿತು.
ಕ್ಷೇತ್ರದ ನಿಕಟಪೂರ್ವ ಅಧ್ಯಕ್ಷ ಗೆಜ್ಜಗಳ್ಳಿ ಮಹೇಶ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಅವರ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಹಾಗೂ ದೇಶ ಸೇವೆಗೆ ಇನ್ನಷ್ಟು ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಲಾಯಿತು.
ಗೆಜ್ಜಗಳ್ಳಿ ಮಹೇಶ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಆಯಸ್ಸು, ಆರೋಗ್ಯ ಹಾಗೂ ಇನ್ನಷ್ಟು ಶಕ್ತಿ ದೊರೆಯಲಿ. ಅವರ ನೇತೃತ್ವದಲ್ಲಿ ದೇಶ ಸೇವೆಯ ಕಾರ್ಯ ಇನ್ನಷ್ಟು ವರ್ಷಗಳು ಮುಂದುವರಿಯಲಿ. ವಿಶ್ವದಲ್ಲಿ ಶಾಂತಿ ನೆಲೆಸುವುದರೊಂದಿಗೆ ಭಾರತವು ಮತ್ತಷ್ಟು ಪ್ರಗತಿ ಸಾಧಿಸಲಿ ಎಂದು ಆಶಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಅಭಿವೃದ್ಧಿ, ಜನಕಲ್ಯಾಣ, ಸಾಮಾಜಿಕ ಭದ್ರತೆ ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಹಲವು ಕಾರ್ಯಕ್ರಮಗಳು ಜಾರಿಯಾಗಿವೆ ಎಂದರು.
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳು ದೇಶದ ಅಭಿವೃದ್ಧಿಗೆ ವೇಗ ನೀಡುತ್ತಿವೆ ಎಂದು ಮುಖಂಡರು ಅಭಿಪ್ರಾಯಪಟ್ಟರು.
ಕ್ಷೇತ್ರದ ಉಪಾಧ್ಯಕ್ಷ ಮಧುಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಪ್ಪ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಕಡಕೋಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನಾಗೇಶ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಸೇರಿದಂತೆ ರಾಹುಲ್, ರವಿ, ಶಿವಕುಮಾರ್, ಸುರೇಶ್, ಚಂದನ್ ಹಾಗೂ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.