ಬೆಟ್ಟದಪುರ ಸಮೀಪದ ಗೊರಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಶ್ರೀದೊಡ್ಡಮ್ಮ ತಾಯಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.
ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಗೊರಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಶ್ರೀದೊಡ್ಡಮ್ಮ ತಾಯಿ ರಥೋತ್ಸವ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡಿತ್ತು.
ಮೂರು ವರ್ಷಗಳ ಬಳಿಕ ಗೊರಹಳ್ಳಿ, ಕುಳ್ಳಯ್ಯಕೊಪ್ಪಲು, ಕರಡಿಪುರ ಮತ್ತು ದೇವಿನಗರ ಗ್ರಾಮಗಳ ಎಲ್ಲ ಕೋಮಿನ ಭಕ್ತರು ಒಟ್ಟಾಗಿ ಸೇರಿ ಹಬ್ಬದ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಶುಕ್ರವಾರ ಬೆಳಗ್ಗೆ ರಥದ ಮೇಲೆ ಕಳಸ ಪ್ರತಿಷ್ಠಾಪನೆ ಮಾಡಿ, ಬಳಿಕ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡಿ ರಥದ ಮೇಲೆ ಪ್ರತಿಷ್ಠಾಪನೆ ಮಾಡಲಾಯಿತು. ಗ್ರಾಮದ ಶ್ರೀಬಸವೇಶ್ವರ ದೇವಸ್ಥಾನದಿಂದ ಶ್ರೀದೊಡ್ಡಮ್ಮ ಹಾಗೂ ಚಿಕ್ಕಮ್ಮ ತಾಯಿ ದೇವಸ್ಥಾನದವರೆಗೆ ಸಹಸ್ರಾರು ಭಕ್ತರು ರಥವನ್ನು ಎಳೆದರು. ಭಕ್ತರು ಹರಕೆ ತೀರಿಸಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಬೇಡಿಕೊಂಡರು. ಹಬ್ಬದ ಹಿನ್ನಲೆ ಗ್ರಾಮದಲ್ಲಿ ವಿಶೇಷವಾಗಿ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.