ರಾಜ್ಯಮಟ್ಟ ಶ್ರೀ ಗುರು ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ನಗರದಲ್ಲಿ ಭಾನುವಾರ ನಡೆಯಿತು. ಎಂ.ರಾಮಪ್ಪ, ಜಿ.ವಿ.ಸೀತಾರಾಮು, ಎಸ್.ವಿಜಯಕುಮಾರ, ಜಿ.ನಾಗರಾಜು, ಎಚ್.ಕೆ.ದೇವರಾಜು ಇನ್ನಿತರರಿದ್ದರು.
- ಪೂರ್ವಭಾವಿ ಸಭೆಯಲ್ಲಿ ಮುಖಂಡರ ನಿರ್ಧಾರ
- ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟನೆ
- ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಮೆರವಣಿಗೆ
ಮೈಸೂರು: ರಾಜ್ಯಮಟ್ಟದ ಶ್ರೀ ಗುರು ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮ ಮೇ 8ರಂದು ನಗರದ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ.
ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಭೋವಿ ಹಿತರಕ್ಷಣಾ ಸಮಿತಿ ವತಿಯಿಂದ ನಗರದ ಸರ್ಕಾರಿ ಅತಿಥಿಗೃಹ ‘ಜಲದರ್ಶಿನಿ’ಯಲ್ಲಿ ಭಾನುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಮಾಜದ ಮುಖಂಡರು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಿ ಸಲಹೆ-ಸೂಚನೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಸೇರಿದಂತೆ ವಿವಿಧ ಮಂತ್ರಿಗಳು, ಶಾಸಕರು, ಪ್ರಮುಖ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ರಾಜ್ಯದಲ್ಲಿರುವ ಸಮಾಜದ ಎಲ್ಲ ಬಂಧುಗಳು ಉತ್ಸುಕತೆಯಿಂದ ಭಾಗವಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ತೀರ್ಮಾನಿಸಲಾಯಿತು.
ನಗರದ ಪ್ರಮುಖ ಬೀದಿಗಳಲ್ಲಿ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರ ಮೆರವಣಿಗೆ ಅದ್ದೂರಿಯಾಗಿ ಆಯೋಜಿಸಲು ನಿರ್ಣಯಿಸಲಾಯಿತು. ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮ, ಯುವ ಸಮೂಹದಿಂದ ಬೈಕ್, ಕಾರ್ ರ‌್ಯಾಲಿಯನ್ನು ಕೂಡ ಹಮ್ಮಿಕೊಳ್ಳಲು ನಿರ್ಣಯಿಸಲಾಯಿತು.
ವಿವಿಧ ಸಮಿತಿಗಳನ್ನು ರಚನೆ ಮಾಡಿ, ಸಮಾಜದ ವಿವಿಧ ಮುಖಂಡರಿಗೆ ಜವಾಬ್ದಾರಿ ನೀಡಿ ಕಾರ್ಯಕ್ರಮವನ್ನು ಶಿಸ್ತಿನಿಂದ ನಿರ್ವಹಿಸಲು ತಿಳಿಸಲಾಯಿತು.
ಸುಮಾರು 25 ಸಾವಿರ ಸಾರ್ವಜನಿಕರು ಪಾಲ್ಗೊಳ್ಳುವಂತೆ ವ್ಯವಸ್ಥೆ ಮಾಡಲು ಚರ್ಚಿಸಲಾಯಿತು. ಮೊದಲ ಬಾರಿ ಮೈಸೂರು ಪ್ರಾಂತ್ಯದಲ್ಲಿ ನಡೆಯಲಿರುವ ರಾಜ್ಯಮಟ್ಟದ ಈ ಕಾರ್ಯಕ್ರಮದ ಯಶಸ್ಸಿಗೆ ಸಮಾಜದ ಎಲ್ಲ ಮುಖಂಡರು, ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು, ಅಧಿಕಾರಿಗಳು ಸಹಕಾರ ಕೊಡಬೇಕು ಎಂದು ಸಭೆಯಲ್ಲಿ ಕೋರಲಾಯಿತು.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ, ಮಾಜಿ ಅಧ್ಯಕ್ಷ ಜಿ.ವಿ.ಸೀತಾರಾಮು, ಸಂಘದ ಜಿಲ್ಲಾಧ್ಯಕ್ಷ ಎಸ್.ವಿಜಯಕುಮಾರ, ಮಾಜಿ ಅಧ್ಯಕ್ಷ ಜಿ.ನಾಗರಾಜು, ಪ್ರಧಾನ ಕಾರ್ಯದರ್ಶಿ ಎಚ್.ಕೆ.ದೇವರಾಜು, ಮಾಜಿ ಪ್ರಧಾನ ಕಾರ್ಯದರ್ಶಿ ಪಿ.ಮಲ್ಲಯ್ಯ, ಉಪಾಧ್ಯಕ್ಷ ಟಿ.ಕೃಷ್ಣ, ಖಜಾಂಚಿ ಪಿ.ಬಸವರಾಜು, ನೌಕರರ ಸಂಘದ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಮಂಡ್ಯ ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷ ಗುರ್ರಪ್ಪ ಇನ್ನಿತರರಿದ್ದರು