ತಿ.ನರಸೀಪುರ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಭಾನುವಾರ ಶ್ರೀ ಮರುಡೇಶ್ವರಸ್ವಾಮಿ ಜಂಬೂ ಸವಾರಿ ಉತ್ಸವ ವಿಜೃಂಭಣೆಯಿಂದ ಜರುಗಿತು.
- ಮಾದಾಪುರ ಗ್ರಾಮದಲ್ಲಿ ವಿಶೇಷ ಪೂಜೆ
ತಿ.ನರಸೀಪುರ: ತಾಲೂಕಿನ ಮಾದಾಪುರ ಗ್ರಾಮದಲ್ಲಿ ಭಾನುವಾರ ಶ್ರೀ ಮರುಡೇಶ್ವರಸ್ವಾಮಿ ಜಂಬೂ ಸವಾರಿ ಉತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಶ್ರೀ ಗಣೇಶ, ಶ್ರೀ ಮರುಡೇಶ್ವರಸ್ವಾಮಿ ಉತ್ಸವಮೂರ್ತಿಯ ಕುದುರೆ ವಾಹನ ಉತ್ಸವ, ನಾಗಾಭರಣ ಸಹಿತ ಕೊಳಗದ ಜಂಬೂಸವಾರಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಇದಕ್ಕೂ ಮೊದಲು ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.
ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ಹಾಗೂ ಸಾರ್ವಜನಿಕರು ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಶ್ರೀ ಮರುಡೇಶ್ವರ ಸ್ವಾಮಿ ಸಮಿತಿಯಿಂದ ದಾಸೋಹ ವ್ಯವಸ್ಥೆಯನ್ನು ಮಾಡಲಾಗಿತ್ತು. 30 ವರ್ಷಗಳ ಹಿಂದೆ ಗ್ರಾಮದಲ್ಲಿ ಇದೇ ರೀತಿ ಜಂಬೂ ಸವಾರಿ ಉತ್ಸವ ಏರ್ಪಡಿಸಿದ್ದನ್ನು ಇದೇ ವೇಳೆ ಸ್ಮರಿಸಬಹುದು.