ನೂತನ ಕಿರು ರಥದ ಮೇಲೆ ಸ್ವಾಮಿಯ ಉತ್ಸವ ಮೂರ್ತಿಗಳನ್ನು ಪ್ರತಿಸ್ಥಾಪಿಸಿರುವುದು.
ಬೆಟ್ಟದಪುರ: ಇಲ್ಲಿಗೆ ಸಮೀಪದ ಸೂಳೆಕೋಟೆ (ಹನುಮಂತಪುರ) ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಶ್ರೀ ರಾಮನವಮಿ ಅಂಗವಾಗಿ ಸೀತಾರಾಮ ಹಾಗೂ ಆಂಜನೇಯಸ್ವಾಮಿಯ ಉತ್ಸವ ಮೂರ್ತಿಗಳ ಪ್ರದಕ್ಷಿಣೆ ಭಕ್ತರ ಸಮ್ಮುಖದಲ್ಲಿ ನಡೆಯಿತು.
ದೇವರ ಉತ್ಸವ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿ, ದೇವಸ್ಥಾನ ಸಮಿತಿ ಹಾಗೂ ಸಹಕಾರದಿಂದ ನಿರ್ಮಿಸಿರುವ ನೂತನ ಕಿರು ರಥದ ಮೇಲೆ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಾದ್ಯದೊಂದಿಗೆ ಮೆರವಣಿಗೆ ಮಾಡಲಾಯಿತು. ಇದೆ ವೇಳೆ ಭಕ್ತರು ಸ್ವಾಮಿಯ ಆಶೀರ್ವಾದ ಪಡೆದು, ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಬೇಡಿಕೊಂಡರು.
ಶ್ರೀ ಆಂಜನೇಯಸ್ವಾಮಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಎಚ್.ಶಿಂಗ್ರಿಶೆಟ್ಟಿ, ಉಪಾಧ್ಯಕ್ಷ ಮೋಹನ್‌ರಾಜ್, ಕಾರ್ಯಾಧ್ಯಕ್ಷ ಎಸ್.ಎಸ್.ಶಂಕರಪ್ಪ, ಕಾರ್ಯದರ್ಶಿ ಕೆ.ಶಿವರಾಮ್ ಸೇರಿದಂತೆ ಪದಾಧಿಕಾರಿಗಳು, ಅರ್ಚಕರು ಹಾಗೂ ಭಕ್ತರು ಇದ್ದರು.
ಬೆಟ್ಟದಪುರ ಸಮೀಪದ ಸೂಳೆಕೋಟೆ (ಹನುಮಂತಪುರ) ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶ್ರೀ ರಾಮನವಮಿ ಅಂಗವಾಗಿ ಸೀತಾರಾಮ ಹಾಗೂ ಶ್ರೀ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಗಳ ಪ್ರದಕ್ಷಿಣೆ ಹಾಕಲಾಯಿತು.