ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್
ಮೈಸೂರು: ಶೃಂಗೇರಿ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶ ಪ್ರಕಾರ ನಡೆದುಕೊಳ್ಳಲಾಗುವುದು ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.
ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಆದೇಶದ ನಂತರ ಶಾಸಕ ರಾಜೇಗೌಡ ಅವರು ಪ್ರಮಾಣ ವಚನ ಸ್ವೀಕರಿಸಲು ಸಮಯ ಕೇಳಿದ್ದಾರೆ, ಸಮಯ ಯಾವಾಗ ನೀಡಬೇಕು ಎಂದು ಇಂದು ರಾತ್ರಿ ತೀರ್ಮಾನ ಮಾಡುತ್ತೇನೆ ಎಂದರು.
ಪೆಟ್ರೋಲ್ ಹಾಗೂ ಚಿನ್ನ ಕಡಿಮೆ ಖರೀದಿಸಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಕುರಿತು ಕೇಳದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಸರ್ಕಾರಗಳು ತೀರ್ಮಾನ ಮಾಡುತ್ತವೆ, ನಾನು ಈ ಬಗ್ಗೆ ಮಾತನಾಡುವುದಿಲ್ಲ. ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.