ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು, ಪಾಲಕರು.
- ಪ್ರಾಂಶುಪಾಲೆ ಡಾ.ಬಿ.ಆರ್.ಜಯಕುಮಾರಿ ಕಿವಿಮಾತು
ಮೈಸೂರು: ವಿದ್ಯಾರ್ಥಿಗಳು ಸರ್ವತೋಮುಖ ಅಭಿವೃದ್ಧಿ ಸಾಧಿಸಬೇಕು. ಜತೆಗೆ ನಾಯಕತ್ವದ ಗುಣ ಮೈಗೂಡಿಸಿಕೊಳ್ಳಬೇಕು ಎಂದು ಪ್ರಾಂಶುಪಾಲೆ ಡಾ.ಬಿ.ಆರ್.ಜಯಕುಮಾರಿ ಹೇಳಿದರು.
ಮಹಾಜನ ವಿದ್ಯಾಸಂಸ್ಥೆಯ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ವಾಗತ ಮತ್ತು ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ಜಡವಾಗುತ್ತಿರುವ ಇಂದಿನ ಸಮಾಜವನ್ನು ಸುಧಾರಿಸುವುದೆ ಶಿಕ್ಷಣದ ಪರಮ ಉದ್ದೇಶ ಎಂದರು.
ಪಾಲಕರು ಕೇವಲ ಮಕ್ಕಳನ್ನು ಕಾಲೇಜಿಗೆ ಸೇರಿಸಿ ಜವಾಬ್ದಾರಿ ಮುಗಿಯಿತು ಅಂದುಕೊಳ್ಳದೆ, ನಿರಂತರವಾಗಿ ಅವರ ಶೈಕ್ಷಣಿಕ ಪ್ರಗತಿಯ ಮೇಲೆ ಗಮನ ಕೊಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ನಿವೃತ್ತ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಮಾತನಾಡಿ, ವ್ಯಕ್ತಿತ್ವ ವಿಕಸನಗೊಳಿಸುವುದೇ ಶಿಕ್ಷಣ ಸಂಸ್ಥೆಗಳ ಮೂಲಧ್ಯೇಯವಾಗಬೇಕು ಎಂದರು.
ಮಹಾಜನ ಸಂಸ್ಥೆಯ ಸಮೂಹ ನಿರ್ದೇಶಕ ಡಾ.ಪುನೀತ ಕಾರಿಯಪ್ಪ ಮಾತನಾಡಿ, ಶೈಕ್ಷಣಿಕ ಪಯಣದಲ್ಲಿ ಹಲವು ತೊಡಕುಗಳು ಹಾಗೂ ಸವಾಲುಗಳು ಎದುರಾಗುವುದು ಸಹಜ. ಅಂತಹ ಸಂದರ್ಭಗಳಲ್ಲಿ ಯಾವುದೇ ಕಾರಣಕ್ಕೂ ಗೊಂದಲಕ್ಕೊಳಗಾಗದೆ, ಸ್ಥಿರವಾದ ಏಕಾಗ್ರತೆ ಕಾಯ್ದುಕೊಳ್ಳಬೇಕು. ಸಾಧನೆಯ ಹಾದಿಯತ್ತ ಮಾತ್ರ ಗಮನಹರಿಸಿ ಶ್ರಮಿಸಿದರೆ ಯಶಸ್ಸು ನಿಶ್ಚಿತವಾಗಿರುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮತು ಹೇಳಿದರು.
ಮಹಾಜನ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಡಾ.ಟಿ.ವಿಜಯ ಲಕ್ಷ್ಮೀ ಮುರಳಿಧರ್ ಮಾತನಾಡಿದರು. ಸಂಸ್ಥೆಯ ಆಡಳಿತಾಧಿಕಾರಿ ಪ್ರೊ.ಪಿ.ಸರೋಜಮ್ಮ, ಶೈಕ್ಷಣಿಕ ಸಲಹೆಗಾರ, ಕಾರ್ಯ ನಿರ್ವಹಣಾಧಿಕಾರಿ ಡಾ. ಎಸ್.ಆರ್.ರಮೇಶ್, ಕಾಲೇಜಿನ ಡೀನ್ ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಎಚ್.ಶ್ರೀಧರ್, ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಚ್.ಆರ್.ತಿಮ್ಮೇಗೌಡ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಎನ್.ಸುನೀಲ್, ಡಾ.ಶ್ರೀಧರ್ ಇದ್ದರು