ವಿದ್ಯಾರ್ಥಿಗಳಿಗೆ ಕೌಶಲ ಅಗತ್ಯ : ಕುಲಸಚಿವ ಪ್ರೊ.ಎನ್. ನಾಗರಾಜ  
ಮೈಸೂರು

ವಿದ್ಯಾರ್ಥಿಗಳಿಗೆ ಕೌಶಲ ಅಗತ್ಯ : ಕುಲಸಚಿವ ಪ್ರೊ.ಎನ್. ನಾಗರಾಜ

ಸದೇಶ್ ಕಾರ್ಮಾಡ್
ಮೈಸೂರು: ಪ್ರತಿ ವರ್ಷ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪದವಿ ಪಡೆದು ಹೊರ ಬರುತ್ತಿದ್ದಾರೆ. ಆದರೆ, ಸಾಕಷ್ಟು ವಿದ್ಯಾರ್ಥಿಗಳು ಉದ್ಯೋಗ ಪಡೆಯಲು ವಿಫಲರಾಗುತ್ತಿದ್ದಾರೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎನ್. ನಾಗರಾಜ ಬೇಸರ ವ್ಯಕ್ತಪಡಿಸಿದರು.
ಮೈಸೂರು ವಿಶ್ವವಿದ್ಯಾಲಯದ ಮಾಳವಿಯ ಮಿಷನ್ ಶಿಕ್ಷಕರ ತರಬೇತಿ ಕೇಂದ್ರದ ವತಿಯಿಂದ ಕೇಂದ್ರದ ಸಭಾಂಗಣದಲ್ಲಿ ವಿಶ್ವ ವಿದ್ಯಾಲಯದ ಅತಿಥಿ ಉಪನ್ಯಾಸಕರಿಗೆ ‘ಪರಿಣಾಮಕಾರಿ ಬೋದನೆಗೆ ಅಗತ್ಯವಾದ ಕೌಶಲಗಳು’ ವಿಷಯದ ಕುರಿತು ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿದರು.
ಅಂಕಿ ಅಂಶವೊಂದರ ಪ್ರಕಾರ 23.56 ಲಕ್ಷ ಬಿಎ ಪದವೀಧರರು ನಿರುದ್ಯೋಗಿಗಳಾಗಿದ್ದಾರೆ. ಕೇವಲ ಪದವಿ ಪಡೆದರೆ ಮಾತ್ರ ಸಾಲದು, ಪದವಿಯೊಂದಿಗೆ ಕೈಗಾರಿಕೆ, ಕಂಪನಿಗಳು ಬಯಸುವ ಕೌಶಲವೂ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ತಯಾರಿಸುವ ಕಾರ್ಯ ಆಗಬೇಕು ಎಂದು ಹೇಳಿದರು. ಮಾಳವಿಯ ಮಿಷನ್ ಶಿಕ್ಷಕರ ತರಬೇತಿ ಕೇಂದ್ರದ ನಿರ್ದೇಶಕಿ ಪ್ರೊ.ಎಚ್.ಪಿ. ಜ್ಯೋತಿ ಇದ್ದರು.
ಮಾನಸಗಂಗೋತ್ರಿಯ ಮಾಳವಿಯ ಮಿಷನ್ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಮೈಸೂರು ವಿದ್ಯಾಲಯದ ಅತಿಥಿ ಉಪನ್ಯಾಸಕರಿಗೆ ಆಯೋಜಿಸಿದ್ದ ವಿಚಾರ ಸಂಕಿರಣವನ್ನು ಕುಲಸಚಿವ ಪ್ರೊ.ಎನ್. ನಾಗರಾಜ ಉದ್ಘಾಟಿಸಿದರು.ಮಾಳವಿಯ ಮಿಷನ್ ಶಿಕ್ಷಕರ ತರಬೇತಿ ಕೇಂದ್ರದ ನಿರ್ದೇಶಕಿ ಪ್ರೊ.ಎಚ್.ಪಿ. ಜ್ಯೋತಿ ಇದ್ದರು.