ಹೋಬಳಿ ಮಟ್ಟದ 14 ವರ್ಷದೊಳಗಿನವರ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ವರುಣ ಗ್ರಾಮದ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು.
ಮೈಸೂರು: ತಾಲೂಕಿನ ವರುಣ ಗ್ರಾಮದ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಹೋಬಳಿ ಮಟ್ಟದ 14 ವರ್ಷದೊಳಗಿನವರ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಬಾಲಕಿಯರ ಹಾಗೂ ಬಾಲಕರ ವಾಲಿಬಾಲ್ ತಂಡಗಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿವೆ. ಅಥ್ಲೆಟಿಕ್ಸ್‌ನಲ್ಲಿಯೂ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಲೋಕೇಶ್ ಆರಾಧ್ಯ ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನ, ಸಂಜನಾ ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಕೆಂಡಗಣ್ಣೇಶ್ವರಿ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಯಶಸ್ವಿನಿ 3000 ಮೀಟರ್ ಓಟದಲ್ಲಿ ತೃತೀಯ, 400 ಮೀಟರ್ ಓಟದಲ್ಲಿ ದ್ವಿತೀಯ ಹಾಗೂ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅಮೃತ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ, ಸಂಜನಾ 400 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಈ ಎಲ್ಲ ವಿದ್ಯಾರ್ಥಿಗಳು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಣ ಶಿಕ್ಷಕಿ ರುಕ್ಮವ್ವ ಸೋಮಪ್ಪ ಲಮಾಣಿ, ಹಿರಿಯ ಶಿಕ್ಷಕಿ ಉಮಾ ಹಾಗೂ ಶಾಲೆಯ ಎಲ್ಲ ಸಹಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.