ನಂಜನಗೂಡು ತಾಲೂಕು ಮೂಡಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ಆಯೋಜಿಸಿದ್ದ ಪರಿಸರ ಜಾಗೃತಿ ಮತ್ತು ಸಸಿ ನೆಡುವ ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕ ಕೀರ್ತಿಕುಮಾರ್, ಶಾಲಾ ಮುಖ್ಯಶಿಕ್ಷಕಿ ಗಿರಿಜಾ, ಮುಖಂಡ ಲಿಂಗರಾಜು ಇತರರು ಇದ್ದರು. 
ಮೈಸೂರು

ವಿದ್ಯಾರ್ಥಿಗಳೇ ಪರಿಸರ ಉಳಿಸಲು ಸಂಕಲ್ಪ ಮಾಡಿ

ಮಾದೇಶ್ ತಿ.ನರಸೀಪುರ

ಪ್ರಮುಖ ಮುಖ್ಯಾಂಶಗಳು

  • ಕೀರ್ತಿಕುಮಾರ್ ಸಲಹೆ
  • ಮೂಡಹಳ್ಳಿ ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ
ಕಲ್ಕುಂದ: ಪರಿಸರ ಉಳಿಸಿದರೆ ನಮ್ಮ ಬದುಕು ಹಸಿರಾಗಿ ಇರುತ್ತದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯ ಮೇಲ್ವಿಚಾರಕರ ಕೀರ್ತಿಕುಮಾರ್ ಹೇಳಿದರು.
ನಂಜನಗೂಡು ತಾಲೂಕು ಮೂಡಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಪರಿಸರ ಜಾಗೃತಿ ಹಾಗೂ ಸಸಿ ನೆಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಂದಿನ ಪೀಳಿಗೆಗೆ ಪರಿಸರ ಉಳಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಆದ್ದರಿಂದ ಪ್ರತಿಯೊಬ್ಬರೂ ಸಸಿ ನೆಟ್ಟು ಅದನ್ನು ಮರವಾಗಿ ಬೆಳೆಸುವ ಸಂಕಲ್ಪ ಮಾಡಬೇಕು ಎಂದು ಸಲಹೆ ನೀಡಿದರು.
ಮಾಲಿನ್ಯ ಹೆಚ್ಚಾಗುತ್ತಲಿದ್ದರೂ ಸುಂದರ ವಾತಾವರಣ ನಿರ್ಮಿಸುವುದು ನಮ್ಮ ಕರ್ತವ್ಯವಾಗಬೇಕು ಎಂದರು.
ಗ್ರಾಮದ ಮುಖಂಡ ಲಿಂಗರಾಜು, ಗೌಡ್ರು ಮಾದಪ್ಪ, ಬಸವರಾಜಪ್ಪ, ಶಾಲಾ ಮುಖ್ಯ ಶಿಕ್ಷಕಿ ಗಿರಿಜಾ,
ಸೇವಾ ಪ್ರತಿನಿಧಿ ಜ್ಯೋತಿ ಇತರರು ಇದ್ದರು.